ಟಿ ಪಬ್ಲಿಕ್ ನ್ಯೂಸ್
ಗಿಣಿಗೇರಿಯ ನೇತ್ರಾವತಿ ನಗರದಲ್ಲಿರುವ ಶ್ರೀ ಬಸವೇಶ್ವರ ಎಜ್ಯುಕೇಶನ್ ಟ್ರಸ್ಟ್ (ರಿ.) ವತಿಯಿಂದ ನಡೆಸಲ್ಪಡುತ್ತಿರುವ ಬಸವ ಬೆಳಗು ಆಂಗ್ಲ ಮಾಧ್ಯಮ ಶಾಲೆಯ 2025-26ರ ಎರಡನೇ ಸಂಕಲನಾತ್ಮಕ ಪರೀಕ್ಷೆಗಳು ದಿನಾಂಕ ಮಾರ್ಚ 23 ರಿಂದ 25ರ ವರೆಗೆ ಆರಂಭವಾಗಿವೆ.
ಎಲ್ಲ ಪರೀಕ್ಷಾರ್ಥಿಗಳಿಗೆ ಪ್ರವೇಶ ಪತ್ರವನ್ನು ನೀಡಲಾಗಿದ್ದು, ನಿನ್ನೆಯಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ನಾಳೆ ಮುಕ್ತಾಯಗೊಳ್ಳಲಿವೆ
ನರ್ಸರಿ ತರಗತಿಯಿಂದ ಎಲ್ ಕೆಜಿ, ಯುಕೆಜಿ ಹಾಗೂ 1 ರಿಂದ 4ನೇ ತರಗತಿ ಯವರೆಗೆ ಪರೀಕ್ಷೆಗಳು ನಡೆದಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ಎಂದರೆ ಭಯ ಎನ್ನುವ ವಾತಾವರಣವಿರದೇ ಉತ್ತಮ ವಾತಾವರಣದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯ ಜೊತೆಗೆ ಉತ್ತರಗಳನ್ನು ಸಮರ್ಥವಾಗಿ ಬರೆಯಲು ಕೀ ಆನ್ಸರ್‌ಗಳ ಸಹಾಯದಿಂದ ಉತ್ತರ ಬರೆಯಲು ಅವಕಾಶ ಕಲ್ಪಿಸಲಾಗಿದೆ
ಕರ್ನಾಟಕ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಎಲ್ಲಾ ನಿಯಮಗಳನ್ನು ಚಾಚೂತಪ್ಪದೇ ಪಾಲಿಸುತ್ತ ವಿದ್ಯಾರ್ಥಿಗಳು ಭವಿಷ್ಯದದಲ್ಲಿ ಸ್ಪರ್ಧಾತ್ಮಕ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ನೈತಿಕತೆ, ಪ್ರಾಮಾಣಿಕತೆ, ಆತ್ಮಸ್ಥೆರ್ಯ ಮೈಗೂಡಿಸಿಕೊಳ್ಳುವಂತೆ ಮಕ್ಕಳನ್ನು ರೂಪಿಸಲಾಗುತ್ತಿದೆ
ಈ ದಿಶೆಯಲ್ಲಿ ನಮ್ಮ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಶ್ರಮಿಸುತ್ತಿದ್ದಾರೆ. ಇದಲ್ಲದೆ ಮುಂಬರುವ 2026-27ನೇ ಶೈಕ್ಷಣಿಕ ಸಾಲಿಗಾಗಿ ಪ್ರವೇಶಾತಿಯ ನೋಂದಣಿ ಕಾರ್ಯ ಆರಂಭವಾಗಿದ್ದು, ಆಸಕ್ತ ಪಾಲಕರು ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಮ್ಮ ಶಾಲೆಗೆ ಭೇಟಿ ಕೊಡುವಂತೆ ಮುಖ್ಯೋಪಾಧ್ಯಾಯರಾದ ಶ್ರೀ ರುದ್ರೇಶ ಪಟ್ಟೇದ ಅವರು ವಿನಂತಿಸಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ ಇಲ್ಲವೇ ಸಂಪರ್ಕಿಸಿ : 9353740901, 9739101207, 9731417376
ನೈಜ್ಯ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
ಗಿಣಿಗೇರಾದ ಬಸವ ಬೆಳಗು ಆಂಗ್ಲ ಮಾಧ್ಯಮ ಶಾಲೆ ಪರೀಕ್ಷೆ ಹಾಗೂ ಪ್ರವೇಶಾತಿ ಆರಂಭ
More Stories
ಮಳೆ-ಬೆಳೆಯಿಗಾಗಿ ಮಲ್ಲಾಪುರ ಗಾಳೆಮ್ಮ ದೇವಿಯ ವಿಶೇಷ ಆರಾಧನೆ
“ದಲಿತ ನಾಯಕರಿಗೆ ನ್ಯಾಯ ಕೊಡದಿದ್ದರೆ ಕಾಂಗ್ರೆಸ್ಗೆ ಜನತೆ ತಕ್ಕ ಪಾಠ ಕಲಿಸುತ್ತದೆ: ಕೆ.ಎಚ್.ಮುನಿಯಪ್ಪ ಡಿಸಿಎಂ ಆಗಲಿ ಎಂದು ನಾಗರಾಜ ದೊಡ್ಮನಿ ಆಗ್ರಹ”
“22 ವರ್ಷಗಳ ಅಕ್ರಮ ಮದ್ಯ ಮಾರಾಟಕ್ಕೆ ಅಧಿಕಾರಿಗಳೂ ಶಾಮೀಲು? — ಅಜಯ್ ಬಾರ್ ಮಾಲೀಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ”