ಟಿ ಪಬ್ಲಿಕ್ ನ್ಯೂಸ್
ಗಂಗಾವತಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಎಸ್‌ಟಿ ಮೋರ್ಚ ನಗರ ಮಂಡಲ, ಗಂಗಾವತಿ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಸಂಭ್ರಮದಿಂದ ಹಾಗೂ ಅದ್ದೂರಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಹಾಗೂ ಅಧ್ಯಕ್ಷರಾದ ಶ್ರೀ ಹನುಮಂತಪ್ಪ ನಾಯಕ ಅವರ ನೇತೃತ್ವದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಶ್ರೀ ಎಂ. ಬಸಪ್ಪ ನಾಯಕ (ತಂದೆ: ಭೀಮಣ್ಣ), ಮೂರನೇ ವಾರ್ಡ್ ಜಯನಗರ, ವಾಲ್ಮೀಕಿ ನಗರ ನಿವಾಸಿಯಾಗಿರುವ ಇವರನ್ನು ಭಾರತೀಯ ಜನತಾ ಪಾರ್ಟಿ ಎಸ್‌ಟಿ ಮೋರ್ಚ ನಗರ ಮಂಡಲ ಗಂಗಾವತಿ ಉಪಾಧ್ಯಕ್ಷರಾಗಿ 08-04-2026 ರಂದು ಅಧಿಕೃತವಾಗಿ ನೇಮಕ ಮಾಡಲಾಗಿದೆ.
ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸಲು ಹಾಗೂ ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಎಸ್‌ಟಿ ಮೋರ್ಚ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು. ಹೊಸದಾಗಿ ನೇಮಕಗೊಂಡ ಬಸಪ್ಪ ನಾಯಕ ಅವರು ತಮ್ಮ ಹುದ್ದೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷದ ಬೆಳವಣಿಗೆಗೆ ಕೈಜೋಡಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಈ ಸಮಾರಂಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಹೊಸ ನೇಮಕಾತಿಗೆ ಹರ್ಷ ವ್ಯಕ್ತಪಡಿಸಿ ಶುಭಾಶಯ ಕೋರಿದರು.
ನೈಜ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
More Stories
ಪ್ರೊ. ಬಿ. ಕೃಷ್ಣಪ್ಪರ ರಾಜ್ಯಮಟ್ಟದ ಜಯಂತ್ಯೋತ್ಸವ ಜುಲೈ 1ರಂದು: ಸಾವಿರಾರು ಕಾರ್ಯಕರ್ತರ ಭಾಗವಹಿಸುವ ನಿರೀಕ್ಷೆ
ಕಾರಟಗಿ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿಯಾಗಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಜೂನ್ 24ರಂದು ಹೊಸಳ್ಳಿಯಲ್ಲಿ ಅದ್ದೂರಿಯಾಗಿ ಗಂಗಾದೇವಿ ಜಯಂತಿ: ಸಾಮೂಹಿಕ ವಿವಾಹ, ರಥೋತ್ಸವಕ್ಕೆ ಭರ್ಜರಿ ಸಿದ್ಧತೆ