October 16, 2026

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 2ನೇ ಸ್ಥಾನ – ವಿದ್ಯಾನಿಕೇತನದ ಅಮೋಘ ಸಾಧನೆಗೆ ಸಂಭ್ರಮದ ಸನ್ಮಾನ

ಟಿ ಪಬ್ಲಿಕ್ ನ್ಯೂಸ್

ಗಂಗಾವತಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮೆರೆದ ಶ್ರೀ ವಿದ್ಯಾನಿಕೇತನ ಸಂಸ್ಥೆಯ ಸಾಧನೆಗೆ ಪಟ್ಟಣದಲ್ಲೇ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

ಸಂಸ್ಥೆಯ ಸಂಸ್ಥಾಪಕರಾದ, ಮನೆ ಮನೆಗೆ ಶಿಕ್ಷಣದ ಬೆಳಕು ಹರಡಿದ ಅಕ್ಷರ ಯೋಗಿ, ಶೈಕ್ಷಣಿಕ ಲೋಕದಲ್ಲಿ ಪ್ರಜ್ವಲಿಸುತ್ತಿರುವ ಸೂರ್ಯ ಎಂದು ಖ್ಯಾತಿ ಪಡೆದ ನೆಕ್ಕಂಟಿ ಸೂರಿಬಾಬು ಅವರಿಗೆ ಗಂಗಾವತಿ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಜೋಗದ ಕೃಷ್ಣಪ್ಪ ನಾಯಕ ಹಾಗೂ ಗಾದಿಲಿಂಗಪ್ಪ ನಾಯಕ ಅವರು ಶಾಲ್ ಹೊದಿಸಿ, ಹೂವಿನ ಹಾರ ಹಾಕಿ, ಕೇಕ್ ಕತ್ತರಿಸುವ ಮೂಲಕ ಸನ್ಮಾನಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೂರಿಬಾಬು ಅವರ ಶ್ರಮ, ಸಮರ್ಪಣೆ ಹಾಗೂ ಶಿಕ್ಷಣದ ಮೇಲಿನ ಅಭಿರುಚಿಯೇ ಈ ಮಹತ್ವದ ಸಾಧನೆಗೆ ಕಾರಣವಾಗಿದೆ ಎಂದು ಪ್ರಶಂಸಿಸಿದರು.

ಈ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾನಿಕೇತನ ಸಂಸ್ಥೆಯ ಈ ಸಾಧನೆ ಗಂಗಾವತಿ ತಾಲೂಕಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೂ ಹೆಮ್ಮೆ ತರುವಂತಹದ್ದು ಎಂದು ಅಭಿಪ್ರಾಯ ವ್ಯಕ್ತವಾಯಿತು.

ನೈಜ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್

error: Content is protected !!