ಟಿ ಪಬ್ಲಿಕ್ ನ್ಯೂಸ್
ಕಾರಟಗಿ ನವನಗರ್ : ಕಮ್ಮವಾರಿ ಶಿಕ್ಷಣ ಸಂಸ್ಥೆ (ರಿ.) ರೆಡ್ಡಿ ವೀರಣ್ಣ ಸಂಜೀವಪ್ಪ ಪದವಿ ಪೂರ್ವ ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ – ಐತಿಹಾಸಿಕ ಸಾಧನೆ.
ಈ ವೇಳೆ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಸಂಸ್ಥೆ ವತಿಯಿಂದ ಸನ್ಮಾನ ಸಮಾರೋಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್ ಮಾತನಾಡಿ ನಮ್ಮ ಹೆಮ್ಮೆಯ ಶಿಕ್ಷಣ ಸಂಸ್ಥೆಯು 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು (100%) ಫಲಿತಾಂಶವನ್ನು ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಹಾಗೂ ರಾಜ್ಯಕ್ಕೆ ಆರನೇ ರ್‍ಯಾಂಕ್ ಕಾರಟಗಿ ತಾಲೂಕಿಗೆ ಮೊದಲನೇ ರ‍್ಯಾಂಕ್ ಬಂದಿರುವುದು ವಿಶೇಷವಾಗಿದೆ.ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ. ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಅವರ ಪಾಲಕರಿಗೆ ಉಪನ್ಯಾಸ ವೃಂದಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ನಂತರ ಶಿಕ್ಷಕರಾದ ಅಮರೇಶ್ ಬಿ ಮಾತನಾಡಿ ವಿಜ್ಞಾನ ವಿಭಾಗದಲ್ಲಿ ಒಟ್ಟು 62 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ ಡಿಸ್ಟಿಂಕ್ಷನ್ 47, ಪ್ರಥಮ ದರ್ಜೆ 15, ವಾಣಿಜ್ಯ ವಿಭಾಗದಲ್ಲಿ ಒಟ್ಟು 41 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದು ಡಿಸ್ಟಿಂಕ್ಷನ್ 20 ಪ್ರಥಮ ದರ್ಜೆ 21 ಪಡೆದು ಅತ್ಯುತ್ತಮ ಅಂಕಗಳನ್ನು ಗಳಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳ ವಿವರ: ಸಂಗೀತ ಗೈನ್ ವಿಜ್ಞಾನ 594/600 ಸೈಯದ್ ಫಾತಿಮಾ ಜೋಹರ ವಿಜ್ಞಾನ 594/600 ಶಿರೀಷ ವಿಜ್ಞಾನ 590/600 ಎನ್. ಸ್ನೇಹ ವಿಜ್ಞಾನ 588/600 ತೇಜಸ್ವಿನಿ ಪಿ. ವಾಣಿಜ್ಯ 593/600 ಗಾಯತ್ರಿ ವಾಣಿಜ್ಯ 589/600. ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮನ್ ನಾರಾಯಣ, ಕಾರ್ಯದರ್ಶಿಗಳಾದ ಶ್ರೀ ಎಲ್. ವೀರಭದ್ರ ರಾವ್, ಪ್ರಾಚಾರ್ಯರಾದ ಡಾ. ಮಹಮ್ಮದ್ ರಫೀಕ್, ICSE ವಿಭಾಗದ ಪ್ರಾಂಶುಪಾಲರಾದ ಶ್ರೀದೇವಿ ಕೊಲ್ಲಾ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು
ನೈಜ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
More Stories
“ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ: ತಪ್ಪಿತಸ್ಥರನ್ನು ತಕ್ಷಣ ಅಮಾನತು ಮಾಡಿ, ಇಲ್ಲದಿದ್ದರೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಘೇರಾವ್ – ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ”
ಶಾಲೆಯಲ್ಲೇ ಮುಖ್ಯೋಪಾಧ್ಯಾಯರ ಕಿತ್ತಾಟ! ಸಿಸಿಟಿವಿ ಪರಿಶೀಲಿಸಿ ತಪ್ಪಿತಸ್ಥರನ್ನು ಅಮಾನತು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಿ: ಮಹಾನಾಯಕ ಜನಜಾಗೃತಿ ವೇದಿಕೆ ಆಗ್ರಹ
ರಸ್ತೆ ಒತ್ತುವರಿ ಆರೋಪ ನಿರಾಧಾರ; ಕಾನೂನುಬದ್ಧವಾಗಿಯೇ ರೆಸಾರ್ಟ್ ನಿರ್ಮಿಸಲಾಗಿದೆ: ರಮೇಶ್ ನಾಯಕ