ಟಿ ಪಬ್ಲಿಕ್ ನ್ಯೂಸ್
ಶ್ರೀರಾಮನಗರ, ಏ.16:
ಶ್ರೀರಾಮನಗರದ: ಸಿ.ಎನ್.ಆರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಆಶ್ರಯದಲ್ಲಿ ಆಯೋಜಿಸಲಾದ ಒಂದು ದಿನದ ರಾಜ್ಯಮಟ್ಟದ ಅಧ್ಯಾಪಕರ ಭೋಧನಾ ಸಾಮರ್ಥ್ಯಾಭಿವೃದ್ಧಿ ಕಮ್ಮಟ (FDP) ಯಶಸ್ವಿಯಾಗಿ ಜರುಗಿತು.
ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ನಿರ್ದೇಶಕಿ ಡಾ. ಶೋಭಾ.ಜಿ ಅವರು ಆನ್‌ಲೈನ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಅಧ್ಯಾಪಕರು ತಮ್ಮ ಭೋಧನಾ ಸಾಮರ್ಥ್ಯವನ್ನು ನವೀಕರಿಸಿಕೊಳ್ಳುವುದು ಅವಶ್ಯಕ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಕಾಲೇಜಿನ ವೆಬ್‌ಸೈಟ್‌ನ್ನು ಲೋಕಾರ್ಪಣೆ ಮಾಡಿದ್ದು, ಗ್ರಾಮೀಣ ಕಾಲೇಜು ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವುದು ಮಾದರಿ ಹೆಜ್ಜೆ ಎಂದರು.
ರಾಜ್ಯ ಗುಣಮಟ್ಟ ಭರವಸೆ ಕೋಶದ ನೋಡಲ್ ಅಧಿಕಾರಿ ಡಾ. ವಿಕ್ರಂ ಅವರು 2026-27ನೇ ಸಾಲಿನ ಪ್ರವೇಶಾತಿ ಅಭಿಯಾನ ಪೋಸ್ಟರ್ ಬಿಡುಗಡೆ ಮಾಡಿ ಶುಭಹಾರೈಸಿದರು.
ಕಾರ್ಯಕ್ರಮವನ್ನು ಭೂದಾನಿ ಶ್ರೀ ಚಿಲುಕೂರಿ ವೆಂಕಟರಾಮಕೃಷ್ಣ ದೀಪ ಬೆಳಗಿಸಿ ಉದ್ಘಾಟಿಸಿ, ಕಾಲೇಜು ಇನ್ನಷ್ಟು ಬೆಳೆಯಲಿ ಎಂದು ಆಶಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಶ್ರೀ ರೆಡ್ಡಿ ಶ್ರೀನಿವಾಸ ಅವರು ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಅಧ್ಯಾಪಕರ ಪಾತ್ರ ಮಹತ್ವದ್ದು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಡಾ. ಸರ್ಫರಾಜ್ ಅಹ್ಮದ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಮುಖ್ಯ ಅತಿಥಿಗಳಾದ ಪ್ರೊ. ಹೊನ್ನುರಲಿ ಗ್ರಾಮೀಣ ಭಾಗದಲ್ಲಿ ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆ ಶ್ಲಾಘನೀಯ ಎಂದರು. ಡಾ. ರಾಮಕೃಷ್ಣ ಅವರು ಕಾಲಾನುಗುಣವಾಗಿ ಬದಲಾಗುವ ಅಗತ್ಯವನ್ನು ಒತ್ತಿಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ರಾಬರ್ಟ್ ಜೋಸ್ ಅವರು ಭಾರತೀಯ ಜ್ಞಾನ ವ್ಯವಸ್ಥೆ ಹಾಗೂ ವ್ಯಕ್ತಿತ್ವ ನಿರ್ಮಾಣ ಕುರಿತು ಉಪನ್ಯಾಸ ನೀಡಿದರು. ಶ್ರೀ ಹರಿ ಕೆ.ಎಸ್ ಅವರು ಕೆಸಿಎಸ್‌ಆರ್ ಹಾಗೂ ಡಿಡಿಓ ನಿಯಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಕರಿಗೂಳಿ ಅವರು, ಅಧ್ಯಾಪಕರ ನಿರಂತರ ಅಧ್ಯಯನ ಮತ್ತು ತರಬೇತಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರಮುಖ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ವಿಶ್ವವಿದ್ಯಾಲಯಗಳ ಪ್ರಾಂಶುಪಾಲರು, ಪ್ರಾಧ್ಯಾಪಕರು, ಗಣ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲ ಅಧ್ಯಾಪಕರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವನ್ನು ಕಾಲೇಜಿನ ಯೂಟ್ಯೂಬ್ ಚಾನಲ್ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು.
ನೈಟ್ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
More Stories
ಬಿಸಿಗಾಳಿಗೆ ತಂಪಿನ ಸ್ಪರ್ಶ – ಗಂಗಾವತಿಯಲ್ಲಿ ಉಚಿತ ಮಜ್ಜಿಗೆ ವಿತರಣೆ
ಕಿಷ್ಕಿಂದ ಪಿಯು ಕಾಲೇಜಿಗೆ ಶೇ.100 ಫಲಿತಾಂಶದ ಸಂಭ್ರಮ – ಡಾ. ಚಂದ್ರಪ್ಪ ಮೆಚ್ಚುಗೆ
ಶ್ರೀ ವಿದ್ಯಾನಿಕೇತನ ಪಿಯುಸಿ ಫಲಿತಾಂಶದಲ್ಲಿ ಭರ್ಜರಿ ಸಾಧನೆ – ಉತ್ತರ ಕರ್ನಾಟಕಕ್ಕೆ ಹೊಸ ಗರಿಮೆ