ಟಿ ಪಬ್ಲಿಕ್ ನ್ಯೂಸ್
ದಿ: ಏಪ್ರಿಲ್ 23
ಗಂಗಾವತಿ: ತಾಲ್ಲೂಕಿನ ಅಕ್ಷರ ಪಬ್ಲಿಕ್ ಶಾಲೆಯಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದ್ದು, ಶಾಲೆಯು ಗಮನಾರ್ಹ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಗೆ ಹೆಮ್ಮೆಯ ಕ್ಷಣ ತಂದಿದ್ದಾರೆ.
ಒಟ್ಟು ವಿದ್ಯಾರ್ಥಿಗಳಲ್ಲಿ 7 ಮಂದಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು, 12 ಮಂದಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ.







ಈ ಎಲ್ಲಾ ವಿದ್ಯಾರ್ಥಿಗಳು ಅಂಕಗಳೊಂದಿಗೆ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸಾಧನೆ ಕುರಿತು ಸಂಸ್ಥೆಯ ಅಧ್ಯಕ್ಷ ರವಿ ಚೈತನ್ಯ ರೆಡ್ಡಿ ಹಾಗೂ ಮುಖ್ಯೋಪಾಧ್ಯಾಯನಿ ಸತ್ತಿ ಹಿಮಾರೆಡ್ಡಿ ಸಂತಸ ವ್ಯಕ್ತಪಡಿಸಿ, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ನೈಜ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ