🟥 ಟಿ ಪಬ್ಲಿಕ್ ನ್ಯೂಸ್ ಬಳ್ಳಾರಿ
ದಿನಾಂಕ : 12/05/2026
ಬಳ್ಳಾರಿ ಜಿಲ್ಲೆ: ಸಂಡೂರು ತಾಲೂಕಿನಲ್ಲಿ ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲೂಕು ಅಧ್ಯಕ್ಷರು ಹಾಗೂ ವಿವಿಧ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಇಂದು ನಡೆಯಿತು.
ಈ ಸಂದರ್ಭದಲ್ಲಿ ಸಂಡೂರು ತಾಲೂಕು ಅಧ್ಯಕ್ಷರಾಗಿ ಪರಶುರಾಮ್ ಅವರನ್ನು ಆಯ್ಕೆ ಮಾಡಲಾಗಿದ್ದು, ತಾಲೂಕು ಮಟ್ಟದ ವಿವಿಧ ಪದಾಧಿಕಾರಿಗಳನ್ನೂ ನೇಮಕ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿರುಪಾಕ್ಷಿ ಗೌಡ ನಾಯಕ ಅವರು ಮಾತನಾಡಿ, ಕನ್ನಡ ನಾಡು, ನುಡಿ ಹಾಗೂ ಸಾಮಾಜಿಕ ಹಿತಾಸಕ್ತಿಗಾಗಿ ಸಂಘಟನೆ ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಅಧ್ಯಕ್ಷರು ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ರಾಜು ಗುಜ್ಜಲ್, ಉತ್ತರ ಕರ್ನಾಟಕ ಯುವಘಟಕ ಅಧ್ಯಕ್ಷರಾದ ಬಿ.ಎಂ.ಎಸ್. ಮಂಜುನಾಥ್, ಸಂಡೂರು ಯುವನಾಯಕ ಹಾಗೂ ದಲಿತ ಸೇನಾ ಸಮಿತಿಯ ತಾಲೂಕು ಅಧ್ಯಕ್ಷರಾದ ರಾಜೇಶ್ ಹೆಗಡೆ, ವಿಜಯನಗರ ಜಿಲ್ಲಾ ಕಾರ್ಯದರ್ಶಿಗಳಾದ ರೋಹಿಣಿ ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕಟಿಗಿ, ನಗರ ಘಟಕದ ಅಧ್ಯಕ್ಷರಾದ ನಾಗರಾಜ್ ನಾಯ್ಕ್, ಭುವನಹಳ್ಳಿ ಗ್ರಾಮ ಅಧ್ಯಕ್ಷರಾದ ಶಣ್ಮುಖ ನಾಯಕ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕಾರ್ಯಕ್ರಮವು ಸಂಘಟನೆಯ ಬಲವರ್ಧನೆ ಹಾಗೂ ಕನ್ನಡಪರ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವಂತಾಯಿತು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್
ಸಂಡೂರಿನಲ್ಲಿ ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪದಾಧಿಕಾರಿಗಳ ಆಯ್ಕೆ
More Stories
“ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ: ತಪ್ಪಿತಸ್ಥರನ್ನು ತಕ್ಷಣ ಅಮಾನತು ಮಾಡಿ, ಇಲ್ಲದಿದ್ದರೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಘೇರಾವ್ – ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ”
ಶಾಲೆಯಲ್ಲೇ ಮುಖ್ಯೋಪಾಧ್ಯಾಯರ ಕಿತ್ತಾಟ! ಸಿಸಿಟಿವಿ ಪರಿಶೀಲಿಸಿ ತಪ್ಪಿತಸ್ಥರನ್ನು ಅಮಾನತು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಿ: ಮಹಾನಾಯಕ ಜನಜಾಗೃತಿ ವೇದಿಕೆ ಆಗ್ರಹ
ರಸ್ತೆ ಒತ್ತುವರಿ ಆರೋಪ ನಿರಾಧಾರ; ಕಾನೂನುಬದ್ಧವಾಗಿಯೇ ರೆಸಾರ್ಟ್ ನಿರ್ಮಿಸಲಾಗಿದೆ: ರಮೇಶ್ ನಾಯಕ