🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ : 14/05/2026
“ಅಪರಾಧಿಗಳ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿ” ಭೋವಿ ಸಮಾಜದ ಆಗ್ರಹ
ಕೊಪ್ಪಳ: ಜಿಲ್ಲೆಯ ಧನಕದೊಡ್ಡಿ ಗ್ರಾಮದಲ್ಲಿ ಭೋವಿ ಸಮಾಜದ ಮಹಿಳೆಯ ಮೇಲೆ ನಡೆದಿದ್ದ ಅಮಾನುಷ ಹಲ್ಲೆ ಪ್ರಕರಣವನ್ನು ಖಂಡಿಸಿ, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಭೋವಿ ಸಮಾಜದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಮಹಿಳಾ ಅಧ್ಯಕ್ಷರಾದ ಪುಷ್ಪಾಂಜಲಿ, ಯುವ ಘಟಕದ ಅಧ್ಯಕ್ಷ ಹುಲ್ಲೇಶ್ ಬಂಡಿ ಸೇರಿದಂತೆ ವಿವಿಧ ತಾಲೂಕಿನ ಸಮಾಜದ ಅಧ್ಯಕ್ಷರು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಮಹಿಳೆಯ ಆರೋಗ್ಯ ವಿಚಾರಿಸಿದರು. ಬಳಿಕ ಜಿಲ್ಲೆಯ ಡಿವೈಎಸ್ಪಿ ಅವರೊಂದಿಗೆ ಮಾತುಕತೆ ನಡೆಸಿ, ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪುಷ್ಪಾಂಜಲಿ,“ಮಹಿಳೆಯ ಮೇಲೆ ನಡೆದಿರುವ ಈ ಕ್ರೂರ ಹಲ್ಲೆ ಮಾನವೀಯತೆ ಮರೆತ ದುಷ್ಕೃತ್ಯವಾಗಿದೆ. ಆರೋಪಿಗಳ ವಿರುದ್ಧ ತಕ್ಷಣ ಅಟ್ರಾಸಿಟಿ ಕೇಸ್ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಭೋವಿ ಸಮಾಜದ ಜನರ ಮೇಲೆ ಯಾವುದೇ ರೀತಿಯ ಅನ್ಯಾಯ, ದೌರ್ಜನ್ಯ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಘಟನೆ ಖಂಡಿಸಿ ಸಮಾಜದ ಮುಖಂಡರು ಪೊಲೀಸ್ ಠಾಣೆ ಎದುರು ಆಕ್ರೋಶ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್
ಭೋವಿ ಸಮಾಜದ ಮಹಿಳೆ ಮೇಲೆ ಹಲ್ಲೆ ಖಂಡನೆ
More Stories
“ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ: ತಪ್ಪಿತಸ್ಥರನ್ನು ತಕ್ಷಣ ಅಮಾನತು ಮಾಡಿ, ಇಲ್ಲದಿದ್ದರೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಘೇರಾವ್ – ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ”
ಶಾಲೆಯಲ್ಲೇ ಮುಖ್ಯೋಪಾಧ್ಯಾಯರ ಕಿತ್ತಾಟ! ಸಿಸಿಟಿವಿ ಪರಿಶೀಲಿಸಿ ತಪ್ಪಿತಸ್ಥರನ್ನು ಅಮಾನತು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಿ: ಮಹಾನಾಯಕ ಜನಜಾಗೃತಿ ವೇದಿಕೆ ಆಗ್ರಹ
ರಸ್ತೆ ಒತ್ತುವರಿ ಆರೋಪ ನಿರಾಧಾರ; ಕಾನೂನುಬದ್ಧವಾಗಿಯೇ ರೆಸಾರ್ಟ್ ನಿರ್ಮಿಸಲಾಗಿದೆ: ರಮೇಶ್ ನಾಯಕ