🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ :28/05/2026
ಗಂಗಾವತಿ: ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಗುರುವಾರ ಬೆಳಗ್ಗೆ 9:30ಕ್ಕೆ ಭಕ್ತಿಭಾವದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಬೆಳಗ್ಗಿನ ಜಾವದಿಂದಲೇ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದವರು ಈದ್ಗಾ ಮೈದಾನಕ್ಕೆ ಆಗಮಿಸಿ ವಿಶೇಷ ನಮಾಜ್ ನೆರವೇರಿಸಿದರು. ಹಬ್ಬದ ಸಂಭ್ರಮದ ನಡುವೆ ದೇಶದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಮೃದ್ಧಿ ನೆಲೆಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಾರ್ಥನೆ ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡ ಮುಸ್ಲಿಂ ಬಾಂಧವರು ಭ್ರಾತೃತ್ವ, ಏಕತೆ ಮತ್ತು ಸಹಬಾಳ್ವೆಯ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಗುರುಗಳಾದ ಕಮಲ್ ಮುಸ್ತಫ ಹಾಫಿಜ್, ಕಾಂಗ್ರೆಸ್ ಮುಖಂಡ ಅಖ್ತರ್ ಅನ್ಸಾರಿ, ಅಯ್ಯೂಬ್ ಅನ್ಸಾರಿ, ಎಸ್.ಬಿ. ಖಾದ್ರಿ, ಕಿಷ್ಕಿಂದ ವಾಹಿನಿಯ ಮುಖ್ಯಸ್ಥ ಸೈಯದ್ ಅಲಿ, ಕರ್ನಾಟಕ ಪವರ್ ಟಿವಿ ವಾಹಿನಿಯ ಮುಖ್ಯಸ್ಥ ಎಂ.ಡಿ. ಅಲಿ, ಕೆ.ಆರ್.ಪಿ.ಪಿ ಪಕ್ಷದ ಮುಖಂಡ ಮೆಹಫೂಜ್ ಅಲಿಖಾನ್, ಈದ್ಗಾ ಕಮಿಟಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ನಗರ ಸಭೆ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು, ಹಿರಿಯರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬಕ್ರೀದ್ ಹಬ್ಬದ ಪ್ರಯುಕ್ತ ನಗರದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಮುಸ್ಲಿಂ ಬಾಂಧವರು ಕುಟುಂಬ ಸಮೇತರಾಗಿ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್
More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ