May 29, 2026

“ಆಶಾ ಕಾರ್ಯಕರ್ತೆಯರ ಆಕ್ರೋಶ ಸ್ಫೋಟ: ಗೌರವಧನ ಬಾಕಿ, ಪ್ರೋತ್ಸಾಹಧನ ಕಡಿತಕ್ಕೆ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ”

🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ :29/05/2026

ಗಂಗಾವತಿ: ನಗರದ ಶ್ರೀ ಕೃಷ್ಣದೇವರಾಯ ವೃತ್ತದ ಬಳಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ ನೇತೃತ್ವದಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ತಮ್ಮ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ತೀವ್ರ ಪ್ರತಿಭಟನೆ ನಡೆಸಿದರು.

ನಂತರ ಮಾತನಾಡಿದ ಶರಣು ಗಡ್ಡಿ. ರಾಜ್ಯದ ಆಶಾ ಕಾರ್ಯಕರ್ತೆಯರು ಅನೇಕ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಹಲವು ತಿಂಗಳುಗಳಿಂದ ಮಾಸಿಕ ಗೌರವಧನ ಹಾಗೂ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸಮರ್ಪಕವಾಗಿ ಬಿಡುಗಡೆಯಾಗುತ್ತಿಲ್ಲ ಹಾಗೂ ಮೂರುರಿಂದ ನಾಲ್ಕು ತಿಂಗಳವರೆಗೆ ಕೇಂದ್ರದ ಪ್ರೋತ್ಸಾಹಧನ ಬಾಕಿ ಉಳಿದಿದ್ದು, ಒಂದರಿಂದ ಮೂರು ತಿಂಗಳವರೆಗೆ ಗೌರವಧನ ಪಾವತಿಯಾಗದೇ ಆಶಾ ಕಾರ್ಯಕರ್ತೆಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

ಹಲವಾರು ವರ್ಷಗಳಿಂದ ಬಾಕಿ ಇರುವ ವಿವಿಧ ಕಂಪೋನೆಂಟ್‌ಗಳ ಹಣ ಇನ್ನೂ ಬಿಡುಗಡೆಯಾಗಿಲ್ಲ. ಟಿಬಿ, ಟಿಬಿಐ, ಎನ್ಸಿಡಿ ಸೇರಿದಂತೆ ವಿವಿಧ ಆರೋಗ್ಯ ಕಾರ್ಯಕ್ರಮಗಳ ಪ್ರೋತ್ಸಾಹಧನವೂ ತಿಂಗಳುಗಳಿಂದ ಬಾಕಿಯಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ರಾಜ್ಯ ಮಟ್ಟದ ಸಮಸ್ಯೆ ಎಂದು ಹೇಳಿ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು.

ಇದೇ ವೇಳೆ ಉಪನಿರ್ದೇಶಕರು, ಇಎಂಎಸ್ ಮತ್ತು ಆಶಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಪತ್ರದ ವಿರುದ್ಧವೂ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಆದೇಶದಿಂದ ಪ್ರತಿ ಆಶಾ ಕಾರ್ಯಕರ್ತೆಗೆ ₹500 ರಿಂದ ₹1000ರವರೆಗೆ ಪ್ರೋತ್ಸಾಹಧನ ಕಡಿತವಾಗುವ ಆತಂಕ ಎದುರಾಗಿದೆ ಎಂದು ಹೇಳಿದರು.

ತಾಯಿ-ಮಗು ಸುರಕ್ಷತೆ ಹಾಗೂ ಬಡಜನರ ಆರೋಗ್ಯ ರಕ್ಷಣೆಗೆ ಅತ್ಯಂತ ಅಗತ್ಯವಾಗಿರುವ ಸೇವೆಗಳನ್ನು ಆಶಾ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ. ಇದೀಗ ಈ ಸೇವೆಗಳನ್ನು ಸ್ಥಗಿತಗೊಳಿಸುವ ಪರಿಸ್ಥಿತಿ ನಿರ್ಮಾಣವಾದರೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀಳಲಿದೆ ಎಂದು ಎಚ್ಚರಿಕೆ ನೀಡಿದರು. ಮೇಲಿನ ಎಲ್ಲಾ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಹಿಡಿದು, ಸಂಘದ ಮುಖಂಡರೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ವತಿಯಿಂದ ಮಾನ್ಯ ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ತಾಲೂಕು ವೈದ್ಯಾಧಿಕಾರಿಗಳಾದ ಗಂಗಾವತಿ( ಸಿಬ್ಬಂದಿಗಳಾದ ಕ್ಲರ್ಕ್ ಮುತ್ತಣ್ಣ. ಆಶಾ ಮೇಲ್ವಿಚಾರಕರು ಮಂಜುಳಾ ) ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯಾ ಡಿ., ತಾಲೂಕು ಅಧ್ಯಕ್ಷರು ಜ್ಯೋತಿ ಲಕ್ಷ್ಮಿ, ನಗರ ಘಟಕ ಅಧ್ಯಕ್ಷರು ವಿಜಯಲಕ್ಷ್ಮಿ ಸೇರಿದಂತೆ ಅನೇಕ ಸದಸ್ಯರು

ಆಶಾ ಕಾರ್ಯಕರ್ತೆಯರ ಪ್ರಮುಖ 10 ಕಠಿಣ ಬೇಡಿಕೆಗಳು

1. ಆಶಾ ಕಾರ್ಯಕರ್ತೆಯರ ಬಾಕಿ ಉಳಿದಿರುವ ಎಲ್ಲಾ ಗೌರವಧನ ಹಾಗೂ ಕೇಂದ್ರ ಸರ್ಕಾರದ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು.

2. ಮೂರುರಿಂದ ನಾಲ್ಕು ತಿಂಗಳುಗಳಿಂದ ಬಾಕಿ ಉಳಿದಿರುವ ಕೇಂದ್ರದ ಪ್ರೋತ್ಸಾಹಧನವನ್ನು ಯಾವುದೇ ವಿಳಂಬವಿಲ್ಲದೆ ಪಾವತಿಸಬೇಕು.

3. ಒಂದರಿಂದ ಮೂರು ತಿಂಗಳವರೆಗೆ ಪಾವತಿಯಾಗದ ಮಾಸಿಕ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಿ ಆಶಾ ಕಾರ್ಯಕರ್ತೆಯರ ಆರ್ಥಿಕ ಸಂಕಷ್ಟ ನಿವಾರಿಸಬೇಕು.

4. ಹಲವಾರು ವರ್ಷಗಳಿಂದ ಬಾಕಿ ಉಳಿದಿರುವ ವಿವಿಧ ಕಂಪೋನೆಂಟ್‌ಗಳ ಹಣವನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಬೇಕು.

5. ಟಿಬಿ, ಟಿಬಿಐ, ಎನ್ಸಿಡಿ ಸೇರಿದಂತೆ ವಿವಿಧ ಆರೋಗ್ಯ ಕಾರ್ಯಕ್ರಮಗಳ ಪ್ರೋತ್ಸಾಹಧನವನ್ನು ತಕ್ಷಣ ಪಾವತಿಸಬೇಕು.

6. ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನ ಕಡಿತಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು.

7. ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ನಿಗದಿತ ವೇತನ ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು.

8. ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತು ಸಂಘದ ಮುಖಂಡರೊಂದಿಗೆ ತುರ್ತು ಸಭೆ ನಡೆಸಿ ಶಾಶ್ವತ ಪರಿಹಾರ ಕಂಡುಹಿಡಿಯಬೇಕು.

9. ತಾಯಿ-ಮಗು ಸುರಕ್ಷತೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಗಳಿಗೆ ಅಡ್ಡಿಯಾಗದಂತೆ ಆಶಾ ಕಾರ್ಯಕರ್ತೆಯರ ಸೇವಾ ಭದ್ರತೆ ಖಚಿತಪಡಿಸಬೇಕು.

10. ಆಶಾ ಕಾರ್ಯಕರ್ತೆಯರ ಹೋರಾಟವನ್ನು ನಿರ್ಲಕ್ಷ್ಯ ಮಾಡದೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

About The Author

error: Content is protected !!