June 22, 2026

ವಿಶ್ವ ತಂಬಾಕು ರಹಿತ ದಿನಾಚರಣೆ: ತಂಬಾಕು ವ್ಯಸನದ ವಿರುದ್ಧ ಜಾಗೃತಿ ಜಾಥಾ ಹಾಗೂ ಬೀದಿ ನಾಟಕ

🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ: 01/06/2026

“ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು” – ಡಾ. ಆಬಿದ್ ಹುಸೇನ್

ಗಂಗಾವತಿ: ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಗಂಗಾವತಿ ನಗರದ ಸ್ಪೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಹಾಗೂ ಡಾ. ಎಸ್ ವಿ.ಸವಡಿ ಆಯುರ್ವೇದ ಆಸ್ಪತ್ರೆಯ ವತಿಯಿಂದ ಸಾರ್ವಜನಿಕರಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಆಯೋಜಕರು ಡಾಕ್ಟರ್ ಬಸವರಾಜ್ ಸವಡಿ ಪ್ರಾಚಾರ್ಯರು,ಐ ಕ್ಯೂ ಎಸ್ ಸಿ. ಸಂಯೋಜಕರು ಡಾ. ಖಾಲಿದ್ ಬಿ.ಎಂ, ಆಗದ ತಂತ್ರ ವಿಭಾಗದ ಮುಖ್ಯಸ್ಥರಾದಂತಹ ಡಾಕ್ಟರ್ ಸರಸ್ವತಿ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಆಬಿದ್ ಹುಸೇನ್, ತಂಬಾಕು, ಗುಟ್ಕಾ, ನಶ್ಯಪುಡಿ ಹಾಗೂ ಧೂಮಪಾನದಂತಹ ದುಶ್ಚಟಗಳು ಮಾನವ ಆರೋಗ್ಯವನ್ನು ಗಂಭೀರವಾಗಿ ಹಾನಿಗೊಳಿಸಿ ನಾಶದ ಅಂಚಿಗೆ ತಳ್ಳುತ್ತವೆ ಎಂದು ಹೇಳಿದರು. ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕೋಶದ ತೊಂದರೆಗಳು ಸೇರಿದಂತೆ ಅನೇಕ ಮಾರಕ ರೋಗಗಳು ಉಂಟಾಗುತ್ತವೆ ಎಂದು ವಿವರಿಸಿ, ಇವುಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಇಲಾಖೆಯ ಶ್ರೀಮತಿ ಕಲಾವತಿ ಮಾತನಾಡಿ. ಇತ್ತೀಚಿನ ದಿನಗಳಲ್ಲಿ ಯುವಜನತೆ ಹಾಗೂ ಮಹಿಳೆಯರು ಸಹ ತಂಬಾಕು ವ್ಯಸನದ ಜಾಲಕ್ಕೆ ಸಿಲುಕುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದು ಸಮಾಜದ ಆರೋಗ್ಯಕರ ಭವಿಷ್ಯಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು. ಅಲ್ಲದೆ ತಂಬಾಕು ವ್ಯಸನವು ಕುಟುಂಬ ವ್ಯವಸ್ಥೆಯ ಮೇಲೆಯೂ ದುಷ್ಪರಿಣಾಮ ಬೀರುತ್ತಿದೆ ಎಂದು ತಿಳಿಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರದರ್ಶಿಸಿದ ಬೀದಿ ನಾಟಕಗಳು ಸಾರ್ವಜನಿಕರ ಗಮನ ಸೆಳೆದು, ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಜೀವಂತವಾಗಿ ಬಿಂಬಿಸಿದವು. ಜಾಗೃತಿ ಜಾಥಾ ಹಾಗೂ ನಾಟಕದ ಮೂಲಕ ಸಾರ್ವಜನಿಕರಲ್ಲಿ ತಂಬಾಕು ವಿರೋಧಿ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎಸ್. ಸವಡಿ, ಕಾರ್ಯಕ್ರಮ ಸಂಯೋಜಕರಾದ ಡಾ. ಖಾಲಿದ್ ಬಿ.ಎಂ., ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಆಬಿದ್ ಹುಸೇನ್, ನಗರ ಸಂಚಾರಿ ಪೊಲೀಸ್ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕ ವೈದ್ಯರು,ವೈದ್ಯಕೀಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

About The Author

error: Content is protected !!