🟥 ಟಿ ಪಬ್ಲಿಕ್ ನ್ಯೂಸ್ ಕೊಪ್ಪಳ
ದಿನಾಂಕ: 01/06/2026
ಸಾಮಾಜಿಕ ನ್ಯಾಯ, ಶೈಕ್ಷಣಿಕ ಸಬಲೀಕರಣ ಮತ್ತು ಸಮುದಾಯ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ; ಗಣ್ಯರಿಂದ ಅಭಿನಂದನೆಗಳ ಮಹಾಪೂರ
ಕೊಪ್ಪಳ: ಕೊಪ್ಪಳದ ಖ್ಯಾತ ಸಮಾಜಸೇವಕ, ಶಿಕ್ಷಣ ತಜ್ಞ, ಅರ್ಥಶಾಸ್ತ್ರಜ್ಞ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಡಾ. ಅಬ್ದುಲ್ ರಹೀಮಾನ್ ಅವರನ್ನು BAMCEF ಸಂಸ್ಥೆಯ ಕರ್ನಾಟಕ ರಾಜ್ಯದ ಗುಲ್ಬರ್ಗಾ ವಿಭಾಗದ ವಿಭಾಗೀಯ ಸಂಚಾಲಕರಾಗಿ ನೇಮಕ ಮಾಡಲಾಗಿದೆ. ನವದೆಹಲಿಯ BAMCEF ಕೇಂದ್ರ ಕಾರ್ಯಾಲಯ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ.

ಹಲವು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಅಬ್ದುಲ್ ರಹೀಮಾನ್ ಅವರ ಸೇವೆ ಮತ್ತು ಸಂಘಟನಾ ಸಾಮರ್ಥ್ಯವನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ.

ನೇಮಕಾತಿ ಕುರಿತು ಪ್ರತಿಕ್ರಿಯಿಸಿದ ಅವರು, BAMCEF ಸಂಘಟನೆಯ ಧ್ಯೇಯ ಮತ್ತು ಉದ್ದೇಶಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಹಾಗೂ ಸಾಮಾಜಿಕ ನ್ಯಾಯ, ಶೈಕ್ಷಣಿಕ ಸಬಲೀಕರಣ ಮತ್ತು ಸಮುದಾಯ ಅಭಿವೃದ್ಧಿಗಾಗಿ ಸಮರ್ಪಿತವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಈ ನೇಮಕಾತಿಯನ್ನು ವಿವಿಧ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ವಲಯದ ಮುಖಂಡರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :ಡಾ. ಅಬ್ದುಲ್ ರಹೀಮಾನ್ M.A., Ph.D. (Economics) ಸಮಾಜಸೇವಕ | ಶಿಕ್ಷಣ ತಜ್ಞ | ನಿವೃತ್ತ ಪ್ರಾಧ್ಯಾಪಕ ಮೊ.: 9449688789
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್
More Stories
ಕಾರಟಗಿ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿಯಾಗಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಜೂನ್ 24ರಂದು ಹೊಸಳ್ಳಿಯಲ್ಲಿ ಅದ್ದೂರಿಯಾಗಿ ಗಂಗಾದೇವಿ ಜಯಂತಿ: ಸಾಮೂಹಿಕ ವಿವಾಹ, ರಥೋತ್ಸವಕ್ಕೆ ಭರ್ಜರಿ ಸಿದ್ಧತೆ
ಮೊಹರಂ ಹಬ್ಬ ಶಾಂತಿಯುತ ಆಚರಣೆಗೆ ಸಹಕರಿಸಿ: ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಹಾಗೂ ಸಿಪಿಐ ರಂಗಪ್ಪ ದೊಡ್ಮನಿ ಕರೆ