🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ: 05/06/2026
“ಒಂದು ಸಸಿ – ಒಂದು ಭವಿಷ್ಯ: ಪರಿಸರ ರಕ್ಷಣೆಗೆ ಪ್ರತಿಯೊಬ್ಬರ ಸಂಕಲ್ಪ ಅಗತ್ಯ”.
ಗಂಗಾವತಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯತ್ ಕೊಪ್ಪಳ, ತಾಲೂಕು ಪಂಚಾಯತ್ ಗಂಗಾವತಿ ಹಾಗೂ ಗ್ರಾಮ ಪಂಚಾಯಿತಿ ವಡ್ಡರಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ “ಸ್ವಚ್ಛ ಗ್ರಾಮ–ಸುರಕ್ಷಿತ ಹವಾಮಾನ” ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಚಲವಾದಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬ ನಾಗರಿಕರೂ ಕನಿಷ್ಠ ಒಂದು ಸಸಿಯಾದರೂ ನೆಟ್ಟು ಅದರ ಪೋಷಣೆ ಮಾಡುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು. ಮರಗಳ ಸಂಖ್ಯೆ ಹೆಚ್ಚಾದರೆ ಮಾತ್ರ ಶುದ್ಧ ಗಾಳಿ, ಸಮರ್ಪಕ ಮಳೆ ಹಾಗೂ ಆರೋಗ್ಯಕರ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗದೇ, ಪ್ರತಿದಿನವೂ ಪರಿಸರ ಸಂರಕ್ಷಣೆಗೆ ಬದ್ಧರಾಗುವ ಸಂಕಲ್ಪದ ದಿನವಾಗಬೇಕು. ಪರಿಸರ ಉಳಿದರೆ ಮಾತ್ರ ಮಾನವಕುಲದ ಭವಿಷ್ಯ ಸುರಕ್ಷಿತವಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ನಂತರ ಪಂಚಾಯಿತಿ ಆವರಣದಲ್ಲಿ ಹತ್ತಕ್ಕೂ ಅಧಿಕ ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.


ನಂತರ ಕಾರ್ಯಕ್ರಮಕ್ಕೆ ಆಗಮಿಸಿದ ಕಾರ್ಯಕರ್ತರಿಗೆ ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸಲಾಯಿತು


ಕಾರ್ಯಕ್ರಮದಲ್ಲಿ ಪಂಚಾಯಿತಿ ಕಾರ್ಯದರ್ಶಿ ಈಶಪ್ಪ, ಬಿಲ್ ಕಲೆಕ್ಟರ್ ರುದ್ರಸ್ವಾಮಿ, ಆಂಜನಪ್ಪ, ನಾಗೇಶ್ವರ, ಜೆ. ಕಲಾವಿದ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್
More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ