🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ: 10/06/2026
ಗಂಗಾವತಿ: ಭಾರತದ ಹೆಮ್ಮೆಯ ಪ್ರಧಾನಮಂತ್ರಿ Narendra Modi ಅವರ 12 ವರ್ಷಗಳ ಆಡಳಿತಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜು ನಾಯಕ ಅವರ ನೇತೃತ್ವದಲ್ಲಿ ಪಂಪ ಸರೋವರದ ವಿಜಯಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ರಾಜು ನಾಯಕ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಬಡವರು, ರೈತರು, ದೀನದಲಿತರ ಅಭಿವೃದ್ಧಿಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಭಾರತವನ್ನು 2047ರ ವೇಳೆಗೆ ವಿಶ್ವದ ಅಗ್ರ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವ ಮಹತ್ವಾಕಾಂಕ್ಷಿ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ದೇಶದ ಅಭಿವೃದ್ಧಿ ಮತ್ತು ಸುಶಾಸನಕ್ಕಾಗಿ ಅವರು ಕೈಗೊಂಡಿರುವ ಕಾರ್ಯಗಳು ಯಶಸ್ವಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು ಎಂದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಗಂಗಾವತಿ ತಾಲೂಕು ಅಧ್ಯಕ್ಷ ಕೃಷ್ಣ ನಾಯಕ, ಕಂಪ್ಲಿ ವಿಧಾನಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷ ಮೇಘರಾಜ್, ಗಂಗಾವತಿ ತಾಲೂಕು ಎಸ್‌ಟಿ ಘಟಕದ ಅಧ್ಯಕ್ಷ ಹನುಮಂತಪ್ಪ ಬೇವೂರು, ಕುಷ್ಟಗಿಯ ರಮೇಶ್ ಕೋನಸಾಗರ್, ನಾಗರಾಜ್ ನಾಯಕ ಪಚ್ಚಿ, ಜಗದೀಶ್ ಪೂಜಾರಿ, ಪರಶುರಾಮ್, ಮಲ್ಲಿಕಾರ್ಜುನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್
More Stories
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪೊಲೀಸರ ಮನವಿ
ಗಂಗಾವತಿಯಲ್ಲಿ ನಿವೇಶನ ರಹಿತರಿಗೆ ಭೂಮಿ ಕಾಯ್ದಿರಿಸಲು ಸಿಪಿಐ ಆಗ್ರಹ
ಗುತ್ತಿಗೆ ಪದ್ಧತಿ ರದ್ದುಪಡಿಸಲು ಒತ್ತಾಯಿಸಿ ಆ.20ರಂದು ಬೆಂಗಳೂರು ಚಲೋ