🟥 ಟಿ ಪಬ್ಲಿಕ್ ನ್ಯೂಸ್ ಕೊಪ್ಪಳ
ದಿನಾಂಕ: 11/06/2026
ಕೊಪ್ಪಳ : ಶ್ರೀಮತಿ ಪಾರ್ವತೆಮ್ಮ ಬಸನಗೌಡ ಎಜುಕೇಷನಲ್ ಮತ್ತು ರೂರಲ್ ಡೆವಲಪ್ಮೆಂಟ್ ಟ್ರಸ್ಟ್, ತಿಪ್ಪನಾಳ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಹುದ್ದೆ ಪದೋನ್ನತಿ ಹೊಂದಿರುವ ಅಧಿಕಾರಿಗಳಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಟ್ರಸ್ಟ್‌ನ ಅಧ್ಯಕ್ಷರಾದ ಮಲ್ಲಿಕಾರ್ಜುನಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿದ ಅಮರೇಶ್ ಹಾಗೂ ವಿಜಯನಗರ ಜಿಲ್ಲೆಯ ಉಪನಿರ್ದೇಶಕರಾಗಿ ಬಡ್ತಿ ಪಡೆದ ಗಂಗಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಪಾಟೀಲ್ ಅವರು, ಸಮಾಜಮುಖಿ ಸೇವೆ ಹಾಗೂ ಇಲಾಖೆಯ ಅಭಿವೃದ್ಧಿಗೆ ಅಧಿಕಾರಿಗಳ ಕೊಡುಗೆ ಶ್ಲಾಘನೀಯವಾಗಿದ್ದು, ಅವರ ಮುಂದಿನ ಸೇವಾ ಅವಧಿಯೂ ಜನಪರ ಕಾರ್ಯಗಳ ಮೂಲಕ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಆರ್.ಕೆ.ಎಸ್.ಕೆ. ಸಂಯೋಜಕರಾದ ಮಹಿಬೂಬ್ ಇಲಾಹಿ ಸೇರಿದಂತೆ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ