August 21, 2026

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಗಂಗಾವತಿಯಲ್ಲಿ ಪಾದಯಾತ್ರೆ ಪ್ರತಿಭಟನೆ

🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ: 11/06/2026

ಗಂಗಾವತಿ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ರಾಜ್ಯ ಸಚಿವ ಸಂಪುಟದ ಎರಡನೇ ಸುತ್ತಿನ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಗಂಗಾವತಿ ನಗರದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಪಾದಯಾತ್ರೆ ನಡೆಸಿ ಪ್ರತಿಭಟಿಸಿದರು.

ನಗರದ ಕರ್ನೂಲ್ ಸಾಹೇಬ ದರ್ಗಾದಿಂದ ಆರಂಭವಾದ ಪಾದಯಾತ್ರೆ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಶ್ರೀ  ಕೃಷ್ಣದೇವರಾಯ ವೃತ್ತದವರೆಗೆ ಸಾಗಿತು. ನಂತರ ಮಾತನಾಡಿದ ನಗರ ಸಭೆ ಮಾಜಿ ಅಧ್ಯಕ್ಷ ಕೆ ವೆಂಕಟೇಶ್ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ನಾಯಕತ್ವವನ್ನು ಒತ್ತಾಯಿಸಿದರು.

ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಗೆ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನಗರ ಸಭೆ ಮಾಜಿ ಅಧ್ಯಕ್ಷ ಕೆ ವೆಂಕಟೇಶ್ , ಸೋಮನಾಥ ಪಟ್ಟಣಶೆಟ್ಟಿ ವಕೀಲರು,ಅಯ್ಯೂಬ್ ಖಾನ್, ಡೈಮಂಡ್ ಸಲೀಂ, ಶಬ್ಬೀರ್ ಭರಣಿ, ಕೆ ಮಂಜುನಾಥ್, ರಾಮಣ್ಣ, ಮಲ್ಲೇಶ್, ಶಾಮಣ್ಣ,ಸೇರಿದಂತೆ, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು, ಯುವಕರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News