🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 12/06/2026
ಗಂಗಾವತಿ: ರಾಜ್ಯದಲ್ಲೇ ಅತಿ ಹೆಚ್ಚು ಭತ್ತ ಬೆಳೆಯುವ ಹಾಗೂ ದೇಶದ ಅನ್ನದಾತರ ಹೆಮ್ಮೆಯ ನಾಡಾದ ಗಂಗಾವತಿಯಲ್ಲಿ ಜೂನ್ 14ರಂದು ಅದ್ಧೂರಿಯಾಗಿ ‘ಜೀ ಕನ್ನಡ ಜಾತ್ರೆ’ ನಡೆಯಲಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ಅಣ್ಣಯ್ಯ’ ಧಾರಾವಾಹಿಯ 500ನೇ ಸಂಚಿಕೆ ಸಂಭ್ರಮದ ಅಂಗವಾಗಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಅಣ್ಣಯ್ಯ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ವಿಕಾಸ್ ಉತ್ತಯ್ಯ (ಶಿವಣ್ಣ) ಹಾಗೂ ನಿಶಾ ಕೃಷ್ಣನ್ (ಪಾರು) ಸೇರಿದಂತೆ ಧಾರಾವಾಹಿಯ ಇತರೆ ಕಲಾವಿದರು ಭಾಗವಹಿಸಲಿದ್ದಾರೆ. ಜೊತೆಗೆ ಆದಿಲಕ್ಷ್ಮಿ ಪುರಾಣ ಧಾರಾವಾಹಿಯ ಕಲಾವಿದರೂ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಖ್ಯಾತ ನಿರೂಪಕಿ ಅನುಶ್ರೀ ಅವರು ವೇದಿಕೆ ನಿರ್ವಹಣೆ ಮಾಡಲಿದ್ದು, ಅಭಿಮಾನಿಗಳಿಗೆ ತಮ್ಮ ನೆಚ್ಚಿನ ತಾರೆಯರನ್ನು ನೇರವಾಗಿ ಭೇಟಿಯಾಗುವ ಅವಕಾಶ ದೊರೆಯಲಿದೆ.
ಜಾತ್ರೆಯ ಅಂಗವಾಗಿ ಮಧ್ಯಾಹ್ನ 2 ಗಂಟೆಯಿಂದ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ, ತೆಂಗಿನಕಾಯಿ ಸುಲಿಯುವ ಸ್ಪರ್ಧೆ, ಮಡಕೆ ಒಡೆಯುವುದು, ಗೋಣಿ ಚೀಲ ಓಟ, ನಿಂಬೆ-ಚಮಚ ರೇಸ್ ಸೇರಿದಂತೆ ಹಲವು ಮನರಂಜನಾ ಆಟಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳಲ್ಲಿ ವಿಜೇತರಾಗುವವರಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುತ್ತದೆ.
ಕಾರ್ಯಕ್ರಮದ ವಿವರ
– ಸ್ಥಳ : ತಾಲೂಕು ಕ್ರೀಡಾಂಗಣ (ಸ್ಟೇಡಿಯಂ), ಗಂಗಾವತಿ
– ದಿನಾಂಕ : ಜೂನ್ 14, 2026
– ಸಮಯ : ಸಂಜೆ 5.30 ಗಂಟೆ
ಇದೇ ವೇಳೆ ಜೂನ್ 16ರಂದು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧಿಗಳ ಸಂಗೀತ ಕಾರ್ಯಕ್ರಮವೂ ನಡೆಯಲಿದ್ದು, ಖ್ಯಾತ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದ ನಿರೂಪಣೆಯನ್ನೂ ಅನುಶ್ರೀ ಅವರು ನಡೆಸಿಕೊಡಲಿದ್ದಾರೆ.
ಜೀ ಕನ್ನಡ ವಾಹಿನಿಯಿಂದ ಉಚಿತ ಪಾಸ್‌ಗಳನ್ನು ನೀಡಲಾಗುತ್ತಿದ್ದು, ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ಮೊದಲಿಗೆ ಬರುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.
ಆದ್ದರಿಂದ ಗಂಗಾವತಿ ಹಾಗೂ ಸುತ್ತಮುತ್ತಲಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜೀ ಕನ್ನಡ ಜಾತ್ರೆಯ ಸಂಭ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಕಾರಟಗಿ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿಯಾಗಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಜೂನ್ 24ರಂದು ಹೊಸಳ್ಳಿಯಲ್ಲಿ ಅದ್ದೂರಿಯಾಗಿ ಗಂಗಾದೇವಿ ಜಯಂತಿ: ಸಾಮೂಹಿಕ ವಿವಾಹ, ರಥೋತ್ಸವಕ್ಕೆ ಭರ್ಜರಿ ಸಿದ್ಧತೆ
ಮೊಹರಂ ಹಬ್ಬ ಶಾಂತಿಯುತ ಆಚರಣೆಗೆ ಸಹಕರಿಸಿ: ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಹಾಗೂ ಸಿಪಿಐ ರಂಗಪ್ಪ ದೊಡ್ಮನಿ ಕರೆ