🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 15/06/2026
ಗಂಗಾವತಿ: ಶ್ರೀಮತಿ ಪಾರ್ವತೆಮ್ಮ ಬಸನಗೌಡ ಎಜುಕೇಷನಲ್ ಮತ್ತು ರೂರಲ್ ಡೆವಲಪ್ಮೆಂಟ್ ಟ್ರಸ್ಟ್, ತಿಪ್ಪನಾಳ ವತಿಯಿಂದ ಹುದ್ದೆ ಪದೋನ್ನತಿ ಹೊಂದಿ ಗಂಗಾವತಿ ತಾಲೂಕಿಗೆ ನೂತನ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಆಗಿ ಅಧಿಕಾರ ವಹಿಸಿಕೊಂಡಿರುವ ಶರಣಪ್ಪ ಗದ್ದಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಮಲ್ಲಿಕಾರ್ಜುನಗೌಡ ಪಾಟೀಲ್ ಮಾತನಾಡಿ, ಗಂಗಾವತಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹಾಗೂ ಅಂಗನವಾಡಿ ಕೇಂದ್ರಗಳ ಬಲವರ್ಧನೆಗೆ ತಮ್ಮ ಇಲಾಖೆಯ ಮೂಲಕ ಹೆಚ್ಚಿನ ಸಹಕಾರ ನೀಡುವಂತೆ ಮನವಿ ಮಾಡಿದರು. ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿದ ಶ್ರೀ ಶರಣಪ್ಪ ಗದ್ದಿ ಅವರು ಇಲಾಖೆಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುನೀತ್ ನಿಡೋಣಿ,ಮಹೇಶ್ ಟಿ ನಾಯಕ, ಸಿಡಿಪಿಓ ಆಫೀಸ್ ಸಿಬ್ಬಂದಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ