October 16, 2026

ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಜನ್ಮದಿನ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ಪೆನ್ ವಿತರಣೆ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 17/06/2026

ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಇಕ್ಬಾಲ್ ಅನ್ಸಾರಿ ಅವರ ಜನ್ಮದಿನದ ಅಂಗವಾಗಿ ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಂಡ್ರಾಳದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಮತ್ತು ಪೆನ್ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ, ಕ್ಷೇತ್ರದ ಜನಪ್ರಿಯ ನಾಯಕ ಶ್ರೀ ಇಕ್ಬಾಲ್ ಅನ್ಸಾರಿ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಯುವ ಕಾಂಗ್ರೆಸ್ ಮುಖಂಡ ಮೆಹಬೂಬ ಅವರು ಮಾತನಾಡಿ, ಮಾಜಿ ಸಚಿವ ಶ್ರೀ ಇಕ್ಬಾಲ್ ಅನ್ಸಾರಿ ಅವರ ಸಮಾಜಮುಖಿ ಕಾರ್ಯಗಳು ಹಾಗೂ ಜನಸೇವೆಯನ್ನು ಸ್ಮರಿಸಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!