🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 22/06/2026
ಗಂಗಾವತಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಸಮಾಜ ಸುಧಾರಕ, ಚಿಂತಕ ಹಾಗೂ ಹೋರಾಟಗಾರರಾದ ಪ್ರೊ. ಬಿ. ಕೃಷ್ಣಪ್ಪ ಅವರ ರಾಜ್ಯಮಟ್ಟದ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜುಲೈ 1, 2026ರಂದು ನಗರದ ಕೃಷ್ಣದೇವರಾಯ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಹ ಸಂಚಾಲಕರಾದ ಹಂಪೇಶ್ ಹರಿಗೋಲ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೊ. ಬಿ. ಕೃಷ್ಣಪ್ಪ ಅವರು ಶಿಕ್ಷಕರಾಗಿಯೇ ಸೀಮಿತವಾಗದೆ ಸಮಾಜದಲ್ಲಿನ ಅನ್ಯಾಯ, ಶೋಷಣೆ ಹಾಗೂ ಅಸಮಾನತೆಗಳ ವಿರುದ್ಧ ನಿರಂತರ ಹೋರಾಟ ನಡೆಸಿದ ಮಹಾನ್ ವ್ಯಕ್ತಿಯಾಗಿದ್ದರು ಎಂದು ಹೇಳಿದರು.
ಶಿಕ್ಷಣದ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಅವರು ಜೀವನಪೂರ್ತಿ ಕೈಗೊಂಡಿದ್ದು, ಅವರ ಆದರ್ಶಗಳು, ತತ್ವಗಳು ಮತ್ತು ಸಿದ್ಧಾಂತಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಅವರ ಜೀವನ ಮೌಲ್ಯಗಳು ಹಾಗೂ ಸಮಾಜಮುಖಿ ಚಿಂತನೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯಮಟ್ಟದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಮಾಜದ ಮುಖಂಡರು ಭಾಗವಹಿಸಲಿದ್ದು, ಸಾವಿರಾರು ಜನರು ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಭಾಗೀಯ ಸಂಚಾಲಕ ಯಮನೂರಪ್ಪ ನಾಯಕ ಹುಲಿಹೈದರ್, ಜಿಲ್ಲಾ ಉಪಾಧ್ಯಕ್ಷ ಗೋವಿಂದಪ್ಪ, ಜಿಲ್ಲಾ ಖಜಾಂಚಿ ಆರ್.ಕೆ. ರಮೇಶ್, ಪಾರ್ವತಮ್ಮ, ಹನುಮಮ್ಮ, ದುರುಗಪ್ಪ ಹೊಸಳ್ಳಿ, ಲೋಕೇಶ್ ಹರಿಗೋಲ, ಶಿವಪ್ಪ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಕಾರಟಗಿ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿಯಾಗಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಜೂನ್ 24ರಂದು ಹೊಸಳ್ಳಿಯಲ್ಲಿ ಅದ್ದೂರಿಯಾಗಿ ಗಂಗಾದೇವಿ ಜಯಂತಿ: ಸಾಮೂಹಿಕ ವಿವಾಹ, ರಥೋತ್ಸವಕ್ಕೆ ಭರ್ಜರಿ ಸಿದ್ಧತೆ
ಮೊಹರಂ ಹಬ್ಬ ಶಾಂತಿಯುತ ಆಚರಣೆಗೆ ಸಹಕರಿಸಿ: ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಹಾಗೂ ಸಿಪಿಐ ರಂಗಪ್ಪ ದೊಡ್ಮನಿ ಕರೆ