July 16, 2026

ರಾಜ್ಯ ಮಟ್ಟದ ಹೋರಾಟಕ್ಕೆ ಕರೆ ನೀಡಿದ ಸುರೇಶ ಚಲವಾದಿ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 09/07/2026

ಗಂಗಾವತಿ: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 2024-25 ಹಾಗೂ 2025-26ನೇ ಸಾಲಿನ ಹದಿನೈದನೇ ಹಣಕಾಸು ಆಯೋಗದ ಅನುದಾನ ಸಮಪರ್ಕವಾಗಿ ಬಿಡುಗಡೆಯಾಗದೆ ಗ್ರಾಮ ಪಂಚಾಯಿತಿಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ಕುಡಿಯುವ ನೀರು,  ನೈರ್ಮಲ್ಯ, ಬೀದಿ ದೀಪ, ಸಿಬ್ಬಂದಿಗಳ ವೇತನ ಹಾಗೂ ಅಗತ್ಯ ಸಾರ್ವಜನಿಕ ಸೇವೆಗಳನ್ನು ನಿರ್ವಹಿಸುವುದು ಅತ್ಯಂತ ಕಷ್ಟಕರವಾಗಿದ್ದು, ರಾಜ್ಯಮಟ್ಟದಲ್ಲಿ ಸೂಕ್ತ ಹೋರಾಟಕ್ಕೆ ತುರ್ತಾಗಿ ಕರೆ ನೀಡಿ, ಸರಕಾರದ ಗಮನ ಸೆಳೆಯುವಂತೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರಾದ ಸುರೇಶ ಚಲವಾದಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದರ ಜೊತೆಗೆ, ಇ-ಸ್ವತ್ತು 2.0 ತಂತ್ರಾಂಶದಲ್ಲಿನ ನಿರಂತರ ತಾಂತ್ರಿಕ ಸಮಸ್ಯೆಗಳಿಂದ ಸಾರ್ವಜನಿಕರ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಸಾವಿರಾರು ಅರ್ಜಿಗಳು ವಿವಿಧ ಹಂತಗಳಲ್ಲಿ ಬಾಕಿಯಾಗಿದ್ದು, ತಾಂತ್ರಿಕ ದೋಷಗಳಿದ್ದರೂ ಅದರ ಹೊಣೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲೆ ಹೊರಿಸಲಾಗುತ್ತಿದೆ. ಇದರಿಂದ ಅಧಿಕಾರಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ.  ಈ ಎಲ್ಲಾ ಸಮಸ್ಯೆಗಳ ಕುರಿತು ಸಂಘದ ವತಿಯಿಂದ ಹಲವಾರು ಬಾರಿ ಸರಕಾರ ಮತ್ತು ಇಲಾಖೆಯ ಗಮನಕ್ಕೆ ತರಲಾಗಿದ್ದರೂ, ಇಲ್ಲಿಯವರೆಗೆ ಯಾವುದೇ ಶಾಶ್ವತ ಹಾಗೂ ಪರಿಣಾಮಕಾರಿ ಪರಿಹಾರ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹಿತಾಸಕ್ತಿ ಹಾಗೂ ಗ್ರಾಮ ಪಂಚಾಯಿತಿಗಳ ಸುಗಮ ಆಡಳಿತದ ದೃಷ್ಟಿಯಿಂದ ಸಂಘವು ಹೋರಾಟದ ಮಾರ್ಗವನ್ನು ಅನುಸರಿಸುವುದು ಅನಿವಾರ್ಯವಾಗಿದೆ. ಆದ್ದರಿಂದ, ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಾಜ್ಯಮಟ್ಟದಲ್ಲಿ ಸೂಕ್ತ ಹೋರಾಟಕ್ಕೆ ತುರ್ತಾಗಿ ಕರೆ ನೀಡಿ, ಸರಕಾರದ ಗಮನ ಸೆಳೆಯುವಂತೆ ರಾಜ್ಯಾಧ್ಯಕ್ಷರು ಕರ್ನಾಟಕ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಇವರು ಸರಕಾರದ ಮಟ್ಟದಲ್ಲಿ ಮನವಿ ಮಾಡಿಕೊಳ್ಳುವಂತೆ . ನಮ್ಮ ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಂಘದ ತೀರ್ಮಾನಕ್ಕೆ ಸಂಘದ ಪರ ಬೆಂಬಲ ಸೂಚಿಸುತ್ತಿದ್ದು, ರಾಜ್ಯ ಸಂಘ ನೀಡುವ ಎಲ್ಲ ಹೋರಾಟದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಿದ್ಧರಿರಬೇಕೆಂದು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News

About The Author

error: Content is protected !!