🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 13/07/2026
ಗಂಗಾವತಿ: ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ ಹಾಗೂ ಪ್ರಾಥಮಿಕ ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ನೂತನ ಅಂಗನವಾಡಿ ಕೇಂದ್ರಗಳನ್ನು ಉದ್ಘಾಟಿಸಲಾಯಿತು.


ಗಂಗಾವತಿ ವಿಧಾನಸಭಾ ಕ್ಷೇತ್ರದ 30ನೇ ವಾರ್ಡ್‌ನ ವಿವೇಕಾನಂದ ಕಾಲೋನಿಯ ನೂತನ ಅಂಗನವಾಡಿ ಕೇಂದ್ರ, ವಡ್ಡರಹಟ್ಟಿ ಗ್ರಾಮದ 2ನೇ ಹಾಗೂ 6ನೇ ಅಂಗನವಾಡಿ ಕೇಂದ್ರಗಳು ಮತ್ತು ಹೊಸಳ್ಳಿ ಗ್ರಾಮದ 2ನೇ ಅಂಗನವಾಡಿ ಕೇಂದ್ರಗಳನ್ನು ಕ್ಷೇತ್ರದ ಶಾಸಕರು ಗಾಲಿ ಜನಾರ್ದನ ರೆಡ್ಡಿಯವರು ಲೋಕಾರ್ಪಣೆ ಮಾಡಿ ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಅಂಗನವಾಡಿ ಕೇಂದ್ರಗಳು ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಆರೋಗ್ಯ ಸೇವೆಗಳ ಬಲವರ್ಧನೆಗೆ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು. ಸರ್ಕಾರ ಮಹಿಳೆಯರು ಹಾಗೂ ಮಕ್ಕಳ ಕಲ್ಯಾಣಕ್ಕೆ ಆದ್ಯತೆ ನೀಡುತ್ತಿದ್ದು, ಮೂಲಸೌಕರ್ಯಗಳ ಅಭಿವೃದ್ಧಿಗೆ ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿ.ಡಿ.ಪಿ.ಓ ಶಿವ ಶರಣಪ್ಪ ಗಡ್ಡಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ್, ಜಿಲ್ಲಾ ಉಪಾಧ್ಯಕ್ಷ ಮನೋಹರ ಗೌಡ ಹೇರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ. ಆಗೋಲಿ, ಮುಖಂಡರಾದ ಯಮನೂರು ಚೌಡ್ಕಿ, ಮಾಜಿ ನಗರಸಭೆ ಅಧ್ಯಕ್ಷ ಪಾಪಣ್ಣ ನಾಯಕ, ಮೊಹಮ್ಮದ್ ಚಾವುಸ್, ಬಸವಂತ ಪಾಟೀಲ್, ಹತ್ತಿಮರದ ಕಾಳಿಂಗ ನಾಯಕ, ಹತ್ತಿಮರದ ಭೀಮೇಶ್, ಬಾಳಪ್ಪ, ಡಾ. ಪಂಚಾಕ್ಷರಿ, ಮಾರುತಿ ನಾಯಕ, ಚಿನ್ನಪ್ಪ ನಾಯಕ ಸೋಮಯ್ಯ, ಶಿವು, ಹೊಸಳ್ಳಿ ಶಿವು, ಬಸವರಾಜ್ ಉಪ್ಪಾರ, ಜಮ್ಮಾಲ್ ಸಾಬ್, ಸಿದ್ದು, ಹಿರಿಯ ಮಹಿಳಾ ಮುಖಂಡೆ ಹುಲಿಗೆಮ್ಮ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕ್ಷೇತ್ರದ ಜನಪ್ರಿಯ ಶಾಸಕರಿಗೆ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಲಾಯಿತು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ