🟥 ಟಿ ಪಬ್ಲಿಕ್ ನ್ಯೂಸ್ | ಕಾರಟಗಿ
ದಿನಾಂಕ: 13/07/2026
ಕಾರಟಗಿ: ಬಿಲ್ವ ಯೋಗ ಅಭ್ಯಾಸ ಕೇಂದ್ರದ ವತಿಯಿಂದ ಗಾಂಧಾರಿ ವಿದ್ಯಾ ಪ್ರಜ್ಞಾ ಯೋಗದ ಮೊದಲ ಬ್ಯಾಚ್ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಹಾಗೂ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕೇಂದ್ರದ ಯೋಗ ಶಿಕ್ಷಕಿ ಪೂರ್ಣಿಮಾ ಎಸ್. ಹುರಕಡಲ್ಲಿ ಅವರ ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಅಭ್ಯಾಸದ ಫಲವಾಗಿ ಬೆಳೆಸಿಕೊಂಡ ಕೌಶಲ್ಯಗಳನ್ನು ಆತ್ಮವಿಶ್ವಾಸದಿಂದ ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರಕ್ಷಾ ಆಸ್ಪತ್ರೆಯ ವೈದ್ಯ ಡಾ. ಅವಿನಾಶ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು. ಮಕ್ಕಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಮಾನಸಿಕ ಬೆಳವಣಿಗೆಗೆ ಇಂತಹ ತರಬೇತಿಗಳು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಗಾಂಧಾರಿ ವಿದ್ಯಾ ಪ್ರಜ್ಞಾ ಯೋಗವು ಮಕ್ಕಳಲ್ಲಿ ಅಂತಃಪ್ರಜ್ಞೆ, ಸ್ಮರಣಶಕ್ತಿ, ಏಕಾಗ್ರತೆ, ಸೃಜನಶೀಲತೆ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಸಲು ಸಹಕಾರಿಯಾಗಿದ್ದು, ನಿಯಮಿತ ಅಭ್ಯಾಸದಿಂದ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ತರಬೇತುದಾರರು ತಿಳಿಸಿದರು.
ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಗೌರವಪೂರ್ವಕವಾಗಿ ಪ್ರಮಾಣಪತ್ರ ವಿತರಿಸಲಾಯಿತು. ವಿದ್ಯಾರ್ಥಿಗಳ ನೇರ ಪ್ರತಿಭಾ ಪ್ರದರ್ಶನಗಳು ಅವರ ಪರಿಶ್ರಮ, ಶಿಸ್ತು ಹಾಗೂ ನಿರಂತರ ಅಭ್ಯಾಸದ ಪ್ರತಿಬಿಂಬವಾಗಿ ಎಲ್ಲರ ಮೆಚ್ಚುಗೆ ಗಳಿಸಿತು.
ಕಾರಟಗಿಯಲ್ಲಿ ಗಾಂಧಾರಿ ವಿದ್ಯಾ ಅಭ್ಯಾಸವನ್ನು ಪರಿಚಯಿಸಿ ಯಶಸ್ವಿಯಾಗಿ ನಡೆಸಿದ ಮೊದಲ ಕೇಂದ್ರ ಎಂಬ ಹೆಗ್ಗಳಿಕೆಗೆ ಬಿಲ್ವ ಯೋಗ ಅಭ್ಯಾಸ ಕೇಂದ್ರ ಪಾತ್ರವಾಗಿದೆ. ಸಂಸ್ಥಾಪಕರಾದ ಪೂರ್ಣಿಮಾ ಎಸ್. ಹುರಕಡಲ್ಲಿ, ಸತೀಶ್ ಹುರಕಡಲ್ಲಿ ಹಾಗೂ ಶರಣಯ್ಯ ಸಿ.ಡಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಪೋಷಕರು ಹಾಗೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಶೀಘ್ರದಲ್ಲೇ ಹೊಸ ಬ್ಯಾಚ್‌ಗಳನ್ನು ಆರಂಭಿಸಲಾಗುವುದು ಎಂದು ಕೇಂದ್ರದ ವತಿಯಿಂದ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಶಾಲೆಯಲ್ಲೇ ಮುಖ್ಯೋಪಾಧ್ಯಾಯರ ಕಿತ್ತಾಟ! ಸಿಸಿಟಿವಿ ಪರಿಶೀಲಿಸಿ ತಪ್ಪಿತಸ್ಥರನ್ನು ಅಮಾನತು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಿ: ಮಹಾನಾಯಕ ಜನಜಾಗೃತಿ ವೇದಿಕೆ ಆಗ್ರಹ
ರಸ್ತೆ ಒತ್ತುವರಿ ಆರೋಪ ನಿರಾಧಾರ; ಕಾನೂನುಬದ್ಧವಾಗಿಯೇ ರೆಸಾರ್ಟ್ ನಿರ್ಮಿಸಲಾಗಿದೆ: ರಮೇಶ್ ನಾಯಕ
ಮಕ್ಕಳ ಭವಿಷ್ಯಕ್ಕೆ ಭದ್ರ ಅಡಿಪಾಯ: ಗಂಗಾವತಿ ಕ್ಷೇತ್ರದಲ್ಲಿ ನೂತನ ಅಂಗನವಾಡಿ ಕೇಂದ್ರಗಳ ಲೋಕಾರ್ಪಣೆ