August 21, 2026

ಕೇಸರಹಟ್ಟಿ ಶಿಕ್ಷಕ ಶರಣಬಸಪ್ಪಗೆ ಪಿಎಚ್‌.ಡಿ. ಪದವಿ ಪ್ರದಾನ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 19/07/2026

ಗಂಗಾವತಿ: ತಾಲೂಕಿನ ಕೇಸರಹಟ್ಟಿ ಕರ್ನಾಟಕ ಪಬ್ಲಿಕ್ ಶಾಲೆ/ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶರಣಬಸಪ್ಪ ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಡಾಕ್ಟರ್ ಆಫ್ ಫಿಲಾಸಫಿ (ಪಿ.ಎಚ್.ಡಿ.) ಪದವಿ ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಿದ್ದಾರೆ.

ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಯಕರ ಹೊನ್ನೂರಸ್ವಾಮಿ ಅವರ ಮಾರ್ಗದರ್ಶನದಲ್ಲಿ “ಆನ್ ಎಕನಾಮಿಕ್ ಅನಾಲಿಸ್ ಆಫ್ ಅಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕೊಪ್ಪಳ ಡಿಸ್ಟ್ರಿಕ್ಟ್” ವಿಷಯದ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ವಿಶ್ವವಿದ್ಯಾನಿಲಯವು ಪಿಎಚ್‌.ಡಿ. ಪದವಿ ಪ್ರದಾನ ಮಾಡಿದೆ.

ಶರಣಬಸಪ್ಪ ಅವರ ಈ ಸಾಧನೆಯು ಗಂಗಾವತಿ ತಾಲೂಕು, ಕೇಸರಹಟ್ಟಿ ಗ್ರಾಮ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಲೇ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿರುವುದು ಯುವ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ.

ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬದ ಸದಸ್ಯರು, ಮಾರ್ಗದರ್ಶಕರು, ಸಂಶೋಧನಾ ಸ್ನೇಹಿತರು, ಸಹೋದ್ಯೋಗಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News