🟥 ಟಿ ಪಬ್ಲಿಕ್ ನ್ಯೂಸ್ | ಕಾರಟಗಿ
ದಿನಾಂಕ: 22/07/2026
ಕಾರಟಗಿ: 2008ರಲ್ಲಿ ಶಿವರಾಜ ತಂಗಡಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಸಂದರ್ಭದಲ್ಲಿ ಬೂತ್ ಏಜೆಂಟ್ ಆಗಿ ರಾಜಕೀಯ ಪ್ರವೇಶ ಮಾಡಿದ ಅವರು, ಅಲ್ಲಿಂದ ಆರಂಭವಾದ ರಾಜಕೀಯ ಪಯಣವನ್ನು ನಿರಂತರವಾಗಿ ಯಶಸ್ವಿಯಾಗಿ ಮುಂದುವರಿಸಿಕೊಂಡು ಬಂದಿದ್ದಾರೆ.


ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಎಪಿಎಂಸಿ, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಿಷ್ಠೆ ಮತ್ತು ಸಂಘಟನಾ ಸಾಮರ್ಥ್ಯವನ್ನು ಗುರುತಿಸಿದ ಪಕ್ಷವು ಮೊದಲಿಗೆ ಬೂತ್ ಕಾರ್ಯದರ್ಶಿಯಾಗಿ ಜವಾಬ್ದಾರಿ ನೀಡಿತು. ಬಳಿಕ ಸಾಮಾಜಿಕ ಜಾಲತಾಣ ಕಾರ್ಯದರ್ಶಿ, ಎಸ್‌ಟಿ ಮೋರ್ಚಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಎಸ್‌ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಪ್ರಸ್ತುತವೂ ಎಸ್‌ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ, ಜಿಲ್ಲಾ ಸಾಮಾಜಿಕ ಜಾಲತಾಣ ಸದಸ್ಯರಾಗಿ ಹಾಗೂ ವಾಲ್ಮೀಕಿ ಮಹಾಸಭಾ (ಯುವ ಘಟಕ) ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ರಾಜಕೀಯ ಚಟುವಟಿಕೆಗಳ ಜೊತೆಗೆ ಅನೇಕ ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ಜಿಲ್ಲಾ ಮಟ್ಟದ ಅನೇಕ ಪ್ರಮುಖ ನಾಯಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಬಿ. ಶ್ರೀರಾಮುಲು, ಕೆ. ಶಿವನಗೌಡ ನಾಯಕ, ಬಿ.ವಿ. ನಾಯಕ, ಪ್ರತಾಪ್ ಗೌಡ ಪಾಟೀಲ್, ತಿಪ್ಪರಾಜು ಹವಾಲ್ದಾರ, ಸುರೇಶ ಬಾಬು, ಸೋಮಲಿಂಗಪ್ಪ, ಕರಡಿ ಸಂಗಣ್ಣ, ಹಾಲಪ್ಪ ಆಚಾರ್, ದೊಡ್ಡನಗೌಡ, ರಾಮಚಂದ್ರಪ್ಪ, ಲಖನ್ ಜಾರಕಿಹೊಳಿ, ರಾಜೂಗೌಡ, ಜೆ.ಎನ್. ಗಣೇಶ್, ಬಸವನಗೌಡ ತುರ್ವಿಹಾಳ್, ಬಸವನಗೌಡ ದದ್ದಲ್, ಕರೆಮ್ಮ ನಾಯಕ, ರಾಜಾ ವೆಂಕಟಪ್ಪ ನಾಯಕ, ಸಿ.ವಿ. ಚಂದ್ರಶೇಖರ, ಬಸವರಾಜ್ ದಡೆಸೂಗೂರು ಸೇರಿದಂತೆ ಹಲವು ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಗ್ರಾಮ ಮಟ್ಟದಲ್ಲಿಯೂ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ ಅವರು, ವಿದ್ಯಾರ್ಹತೆಯಾಗಿ ಎಂ.ಎ. ಹಾಗೂ ಬಿ.ಎಡ್. ಪದವಿ ಪಡೆದಿದ್ದಾರೆ. ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಸಾಮಾಜಿಕ ಸೇವೆಯ ಮೂಲಕ ಜನರ ವಿಶ್ವಾಸ ಗಳಿಸಿರುವ ಅವರು, ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಸೇವೆ ಸಲ್ಲಿಸುವ ಸಂಕಲ್ಪ ಹೊಂದಿದ್ದಾರೆ.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪೊಲೀಸರ ಮನವಿ
ಗಂಗಾವತಿಯಲ್ಲಿ ನಿವೇಶನ ರಹಿತರಿಗೆ ಭೂಮಿ ಕಾಯ್ದಿರಿಸಲು ಸಿಪಿಐ ಆಗ್ರಹ
ಗುತ್ತಿಗೆ ಪದ್ಧತಿ ರದ್ದುಪಡಿಸಲು ಒತ್ತಾಯಿಸಿ ಆ.20ರಂದು ಬೆಂಗಳೂರು ಚಲೋ