August 21, 2026

ಕರ್ತವ್ಯನಿಷ್ಠೆಗೆ ಪ್ರತಿಷ್ಠಿತ ಗೌರವ: ಗಂಗಾವತಿ ಗ್ರಾಮೀಣ ಠಾಣೆ ಸಿಪಿಐ ( ಸಿಂಗಂ ) ರಂಗಪ್ಪ ಹೆಚ್. ದೊಡ್ಡಮನಿ ಅವರಿಗೆ DG & IGP DISC MEDAL-2026

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 24/07/2026

ಗಂಗಾವತಿ: ಪೊಲೀಸ್ ಇಲಾಖೆಯಲ್ಲಿ ನಿಷ್ಠಾವಂತ, ಪ್ರಾಮಾಣಿಕ ಹಾಗೂ ಜನಸ್ನೇಹಿ ಸೇವೆ ಸಲ್ಲಿಸಿರುವ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ( ಸಿಂಗಂ ) ರಂಗಪ್ಪ ಹೆಚ್. ದೊಡ್ಡಮನಿ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ DG & IGP DISC MEDAL-2026 ಪ್ರಶಸ್ತಿ ಲಭಿಸಿದೆ. ಈ ಮೂಲಕ ಅವರು ಗಂಗಾವತಿ ತಾಲೂಕು ಹಾಗೂ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಕರ್ತವ್ಯನಿಷ್ಠೆ, ಶಿಸ್ತು, ಸೇವಾ ಬದ್ಧತೆ ಮತ್ತು ಸಾರ್ವಜನಿಕರೊಂದಿಗೆ ಸ್ನೇಹಪರವಾಗಿ ಕಾರ್ಯನಿರ್ವಹಿಸಿರುವುದನ್ನು ಪರಿಗಣಿಸಿ ಪೊಲೀಸ್ ಇಲಾಖೆಯು ಈ ಪ್ರತಿಷ್ಠಿತ ಗೌರವವನ್ನು ನೀಡಿ ಸನ್ಮಾನಿಸಿದೆ. ಇಲಾಖೆಯಲ್ಲಿ ಅವರ ಸೇವಾ ಸಾಧನೆಗೆ ಈ ಪ್ರಶಸ್ತಿ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದೆ.

ಸಿಪಿಐ ರಂಗಪ್ಪ ಹೆಚ್. ದೊಡ್ಡಮನಿ ಅವರ ಈ ಅಪೂರ್ವ ಸಾಧನೆಗೆ ಪೊಲೀಸ್ ಇಲಾಖೆ, ಸಾರ್ವಜನಿಕರು, ಸ್ನೇಹಿತರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಇದೇ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ ಇನ್ನಷ್ಟು ಉನ್ನತ ಗೌರವಗಳಿಗೆ ಪಾತ್ರರಾಗಲಿ ಎಂದು ಶುಭ ಹಾರೈಸಿದ್ದಾರೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News