October 16, 2026

ಜುಲೈ 27ರಿಂದ ಕಲ್ಮಠದಲ್ಲಿ ಲಿಂಗೈಕ್ಯ ಶ್ರೀ ಕೊಟ್ಟೂರೇಶ್ವರ ಮಹಾಶಿವಯೋಗಿಗಳ 105ನೇ ಸ್ಮರಣೋತ್ಸವ ಹಾಗೂ ಪುರಾಣ ಪ್ರವಚನ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 25/07/2026

ಗಂಗಾವತಿ: ನಗರದ ಐತಿಹಾಸಿಕ ಕಲ್ಮಠದಲ್ಲಿ ಲಿಂಗೈಕ್ಯ ಶ್ರೀ ಕೊಟ್ಟೂರೇಶ್ವರ ಮಹಾಶಿವಯೋಗಿಗಳವರ 105ನೇ ವರ್ಷದ ಸ್ಮರಣೋತ್ಸವ, ಶ್ರೀ ಚನ್ನಬಸವ ಶಿವಯೋಗಿಗಳವರ ಪುರಾಣ ಪ್ರವಚನ ಹಾಗೂ ಶರಣ ಸಂಸ್ಕೃತಿ ಸಮಾರಂಭವು ಜುಲೈ 27ರಿಂದ ಆಗಸ್ಟ್ 6ರವರೆಗೆ ವೈಭವದಿಂದ ನಡೆಯಲಿದೆ ಎಂದು ಕಲ್ಮಠದ ಡಾ. ಕೊಟ್ಟೂರು ಮಹಾಸ್ವಾಮಿಗಳು ತಿಳಿಸಿದ್ದಾರೆ.

ಕಲ್ಮಠದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಜುಲೈ 27ರಂದು ಬೆಳಿಗ್ಗೆ 9 ಗಂಟೆಗೆ ಕಂಪ್ಲಿ ಕಲ್ಮಠದ ಅಭಿನವ ಪ್ರಭು ಮಹಾಸ್ವಾಮಿಗಳವರು ಷಟ್‌ಸ್ಥಳ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಪ್ರತಿದಿನ ಸಂಜೆ 7.30ರಿಂದ ರಾತ್ರಿ 9 ಗಂಟೆಯವರೆಗೆ ಪುರಾಣ ಪ್ರವಚನ ಪ್ರವೀಣ ಪಂಡಿತ ಶಿವರಾಜ್ ಶಾಸ್ತ್ರಿಗಳವರು ಶ್ರೀ ಚನ್ನಬಸವ ಶಿವಯೋಗಿಗಳವರ ಪುರಾಣ ಪ್ರವಚನ ನಡೆಸಲಿದ್ದಾರೆ ಎಂದರು.

ವೀರಶೈವ ಧರ್ಮವು ವಿಶ್ವ ಧಾರ್ಮಿಕ ವ್ಯವಸ್ಥೆಯಲ್ಲಿ ವಿಶಿಷ್ಟ ಸ್ಥಾನ ಹೊಂದಿದ್ದು, ಮಾನವ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಮಹಾಮಹಿಮರ ಜೀವನ, ತತ್ವ ಮತ್ತು ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. “ಮಾನವ ಧರ್ಮಕ್ಕೆ ಜಯವಾಗಲಿ” ಎಂಬ ಸಂದೇಶ ಸಾರುವ ಈ ಧಾರ್ಮಿಕ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಗುರುಗಳ ಆಶೀರ್ವಾದ ಪಡೆಯಬೇಕು ಎಂದು ಡಾ. ಕೊಟ್ಟೂರು ಮಹಾಸ್ವಾಮಿಗಳು ಕರೆ ನೀಡಿದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!