August 21, 2026

ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: ಎಸ್ ಕೆ ಎನ್ ಜಿ ಕಾಲೇಜಿನ ಪರೀಕ್ಷಾ ಕೇಂದ್ರ ಪರಿಶೀಲಿಸಿದ ಗ್ರಾಮೀಣ ಸಿಪಿಐ (ಸಿಂಗಂ) ರಂಗಪ್ಪ ದೊಡ್ಡಮನಿ ಅವರು

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 28/07/2026

ಗಂಗಾವತಿ: ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಗಂಗಾವತಿಯ ಎಸ್ ಕೆ ಎನ್ ಜಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಪರೀಕ್ಷಾ ಕೇಂದ್ರಕ್ಕೆ ಗ್ರಾಮೀಣ ಸಿಪಿಐ (ಸಿಂಗಂ) ರಂಗಪ್ಪ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರದಲ್ಲಿನ ಭದ್ರತಾ ವ್ಯವಸ್ಥೆ, ಪರೀಕ್ಷಾ ಕೊಠಡಿಗಳ ಸಿದ್ಧತೆ ಹಾಗೂ ಅಭ್ಯರ್ಥಿಗಳಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಪರೀಕ್ಷೆ ಯಾವುದೇ ಅಡೆತಡೆ ಇಲ್ಲದೆ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಶಿವರಾಜ ಗುರಿಕಾರ ಅವರೊಂದಿಗೆ ಚರ್ಚಿಸಿದ ಸಿಪಿಐ ರಂಗಪ್ಪ ದೊಡ್ಡಮನಿ, ಪರೀಕ್ಷಾ ಕೇಂದ್ರದ ಸುತ್ತಮುತ್ತ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವುದು, ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ಅವಕಾಶ ನೀಡದಿರುವುದು ಹಾಗೂ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದರು.

ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಶಿಸ್ತುಬದ್ಧ ವಾತಾವರಣ ನಿರ್ಮಿಸಿ, ಪೊಲೀಸ್ ಇಲಾಖೆ ಹಾಗೂ ಕಾಲೇಜು ಆಡಳಿತದ ಸಮನ್ವಯದೊಂದಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News