🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 14/08/2026
ಗಂಗಾವತಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಗಂಗಾವತಿ ನಗರದಲ್ಲಿ ಶುಕ್ರವಾರ ಬೃಹತ್ ತಿರಂಗಾ ಯಾತ್ರೆ ಅದ್ಧೂರಿಯಾಗಿ ನಡೆಯಿತು.


ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ಅವರ ಧರ್ಮಪತ್ನಿ ಲಕ್ಷ್ಮಿ ಅರುಣಾ ಅವರು ಯಾತ್ರೆಯಲ್ಲಿ ಭಾಗವಹಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಾಬು ಜಗಜೀವನ ರಾಮ್ ವೃತ್ತದಿಂದ ಆರಂಭವಾದ ಯಾತ್ರೆಯು ನಗರದ ಪ್ರಮುಖ ವೃತ್ತಗಳ ಮೂಲಕ ಸಂಚರಿಸಿ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಮಾಪನಗೊಂಡಿತು.
ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ‘ಭಾರತ ಮಾತೆಗೆ ಜೈ’, ‘ವಂದೇ ಮಾತರಂ’ ಘೋಷಣೆಗಳೊಂದಿಗೆ ರಾಷ್ಟ್ರಭಕ್ತಿಯ ವಾತಾವರಣ ನಿರ್ಮಾಣವಾಯಿತು.
ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಕಾಡ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮನೋಹರ್ ಗೌಡ ಹೇರೂರು, ನಗರ ಮಂಡಲ ಅಧ್ಯಕ್ಷ ಚಂದ್ರು ಹಿರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿಕೆ ಆಗೋಲಿ, ಯುವ ಮೋರ್ಚಾ ಅಧ್ಯಕ್ಷ ರಮೇಶ್ ಹೊಸಮಲಿ, ಮಾಜಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ್, ಮುಖಂಡರಾದ ಯಮನೂರ್ ಚೌಡ್ಕಿ, ಅರ್ಜುನ್ ನಾಯಕ್, ಶರಣಪ್ಪ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ನಗರಸಭೆ ಸದಸ್ಯರು, ಮಹಿಳಾ ಮುಖಂಡರು, ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ