🟥 ಟಿ ಪಬ್ಲಿಕ್ ನ್ಯೂಸ್ | ಚಿಕ್ಕ ಮಾದಿನಾಳ
ದಿನಾಂಕ: 15/08/2026
ಕನಕಗಿರಿ: ತಾಲೂಕಿನ ವ್ಯಾಪ್ತಿಯ ಚಿಕ್ಕ ಮಾದಿನಾಳ ಗ್ರಾಮದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಕಿತ್ತೂರು ರಾಣಿ ಚೆನ್ನಮ್ಮ ಯುವಕ ಸಂಘದ ಅಧ್ಯಕ್ಷ ಉಮೇಶ್ ಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನಗೌಡ, ಪೊಲೀಸ್ ಪಾಟೀಲ್ ಬಸವರಾಜ್ ವಕ್ರ, ವಿರುಪನಗೌಡ, ಶರಣಪ್ಪ ದನಮನಿ ಸೇರಿದಂತೆ ಗ್ರಾಮದ ಯುವಕ ಸಂಘದ ಸದಸ್ಯರು, ಹಿರಿಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ದೇಶದ ಏಕತೆ, ಅಖಂಡತೆ ಹಾಗೂ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂಬ ಸಂದೇಶವನ್ನು ಸಾರಲಾಯಿತು.
ವಿದ್ಯಾರ್ಥಿಗಳು ಹಾಗೂ ಯುವಕರು ದೇಶಭಕ್ತಿ ಮತ್ತು ರಾಷ್ಟ್ರಪ್ರೇಮದೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಗ್ರಾಮದಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ಮತ್ತಷ್ಟು ಕಳೆಗಟ್ಟುವಂತೆ ಮಾಡಿತು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪೊಲೀಸರ ಮನವಿ
ಗಂಗಾವತಿಯಲ್ಲಿ ನಿವೇಶನ ರಹಿತರಿಗೆ ಭೂಮಿ ಕಾಯ್ದಿರಿಸಲು ಸಿಪಿಐ ಆಗ್ರಹ
ಗುತ್ತಿಗೆ ಪದ್ಧತಿ ರದ್ದುಪಡಿಸಲು ಒತ್ತಾಯಿಸಿ ಆ.20ರಂದು ಬೆಂಗಳೂರು ಚಲೋ