🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 26/08/2026
ಗಂಗಾವತಿ: ತಾಲೂಕಿನ ಆನೆಗೊಂದಿ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಲ್ಲಾಪುರ, ರಾಂಪುರ, ಸಂಗಾಪುರ, ಲಕ್ಷ್ಮೀಪುರ, ಆನೆಗೊಂದಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಲಾಗಿದೆ.
ಸಾರ್ವಜನಿಕರು ಒಬ್ಬೊಬ್ಬರಾಗಿ ಸಂಚರಿಸದೆ, ರೈತರು ಹೊಲ-ಗದ್ದೆಗಳಿಗೆ ತೆರಳುವಾಗ ಕಡ್ಡಾಯವಾಗಿ ಗುಂಪಿನಲ್ಲಿ ತೆರಳಬೇಕು. ಸಾಕುಪ್ರಾಣಿಗಳ ಮೇವಿಗಾಗಿ ಅರಣ್ಯ ಪ್ರದೇಶದತ್ತ ತೆರಳಬಾರದು. ವಿಶೇಷವಾಗಿ ಸಂಜೆ ಹಾಗೂ ರಾತ್ರಿ ವೇಳೆ ಅನಗತ್ಯವಾಗಿ ಮನೆಯಿಂದ ಹೊರಗೆ ಬರದಂತೆ ಎಚ್ಚರಿಕೆ ವಹಿಸಬೇಕು.
ಹುಲಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಸೆರೆಹಿಡಿಯಲು CCF ಬಳ್ಳಾರಿ, DCF ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ, ACF, RFOಗಳು ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುಪಾಪುರ ಗಡ್ಡಿಯ ಫಾರೆಸ್ಟ್ ಐ.ಬಿಯಲ್ಲಿ ಕಾರ್ಯತಂತ್ರ ರೂಪಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.
ಸಾರ್ವಜನಿಕರು ಆತಂಕ ಅಥವಾ ಭಯಕ್ಕೆ ಒಳಗಾಗುವ ಅಗತ್ಯವಿಲ್ಲ. ಅರಣ್ಯ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕಾರ್ಯಾಚರಣೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಸಾರ್ವಜನಿಕರ ಸುರಕ್ಷತೆಯೇ ಮೊದಲ ಆದ್ಯತೆಯಾಗಿದ್ದು, ಎಲ್ಲರೂ ಜಾಗರೂಕರಾಗಿ ಸುರಕ್ಷಿತವಾಗಿರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಲಕ್ಷ್ಮಣಸಾ ಅರಸಿದ್ದಿ ವರ್ಗಾವಣೆ; ನೂತನ ಎಸ್ಪಿಯಾಗಿ ಶಾಹಿಲ್ ಬಾಗ್ಲಾ ನೇಮಕ
ಶ್ರಾವಣ ಹುಣ್ಣಿಮೆ ಅಂಗವಾಗಿ ಸತ್ಯನಾರಾಯಣ ಪೂಜೆ ಆಯೋಜನೆ
*ಉಡುಮಕಲ್ನಲ್ಲಿ ಆತ್ಮೀಯ ಸನ್ಮಾನ: ಬಿಜೆಪಿ ಬಲವರ್ಧನೆಗೆ ವಿರೂಪಾಕ್ಷಪ್ಪ ಸಿಂಗನಾಳ ಕರೆ*