🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 26/08/2026
ಗಂಗಾವತಿ: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ.) ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಆಗಸ್ಟ್ 28ರಂದು ಶುಕ್ರವಾರ ಸಂಜೆ 5 ಗಂಟೆಗೆ ಕೊಪ್ಪಳದ ಪ್ರವಾಸಿ ಮಂದಿರದಲ್ಲಿ (ಐ.ಬಿ.) ಆಯೋಜಿಸಲಾಗಿದೆ.
ಯುವ ಘಟಕವನ್ನು ಮತ್ತಷ್ಟು ಸಶಕ್ತಗೊಳಿಸುವ ಹಾಗೂ ಸಮುದಾಯದ ಯುವಕರನ್ನು ಸಂಘಟಿಸಿ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಈ ಆಯ್ಕೆ ಸಭೆ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಆರ್. ತುಳಸಿರಾಮ್, ರಾಜ್ಯ ಕಾರ್ಯದರ್ಶಿ ಬೆಟ್ಟಪ್ಪ ಕಾಟಾಪುರ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ವಾಲ್ಮೀಕಿ ನಾಯಕ ಸಮುದಾಯದ ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಹಿರಿಯರು, ಮಾರ್ಗದರ್ಶಕರು, ಉತ್ಸಾಹಿ ಯುವಕರು ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡುವಂತೆ ರಾಜ್ಯಾಧ್ಯಕ್ಷ ಟಿ.ಆರ್. ತುಳಸಿರಾಮ್ ಮನವಿ ಮಾಡಿದ್ದಾರೆ.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ