🟥 ಟಿ ಪಬ್ಲಿಕ್ ನ್ಯೂಸ್ | ಕುಕನೂರು
ದಿನಾಂಕ: 26/08/2026
ಕುಕನೂರು: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕೊಪ್ಪಳದಲ್ಲಿ ನಡೆಯಲಿದ್ದ ಡಿಜೆ ಮ್ಯೂಸಿಕ್ ವೀಕ್ಷಿಸಲು ನರಗುಂದದಿಂದ ಕೊಪ್ಪಳದತ್ತ ಬೈಕ್‌ನಲ್ಲಿ ಬರುತ್ತಿದ್ದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ-67ರ ಬನ್ನಿಕೊಪ್ಪ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ನರಗುಂದ ಪಟ್ಟಣದ ಮಾಬೂಸಾಬ್ ತಂದೆ ಬುಡನ್ ಸಾಬ್ ಮಟಗೇರಿ (17), ಫಕ್ರುಸಾಬ್ ತಂದೆ ಹಸನಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೂವರು ಯುವಕರು ಪಲ್ಸರ್ ಬೈಕ್‌ನಲ್ಲಿ ಕೊಪ್ಪಳದತ್ತ ಪ್ರಯಾಣಿಸುತ್ತಿದ್ದರು. ಬನ್ನಿಕೊಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಚರ್ ಆಗಿ ರಸ್ತೆಬದಿಯಲ್ಲಿ ನಿಂತಿದ್ದ ಮಹೇಂದ್ರ ಗೂಡ್ಸ್ ವಾಹನಕ್ಕೆ ಬೈಕ್ ವೇಗವಾಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಬೈಕ್‌ನಲ್ಲಿದ್ದ ಮೂವರು ಯುವಕರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಅಪಘಾತಕ್ಕೀಡಾದ ಮಹೇಂದ್ರ ಗೂಡ್ಸ್ ವಾಹನವು ಸಿದ್ನೇಕೊಪ್ಪ ಗ್ರಾಮದದ್ದು ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಪಘಾತದ ನಿಖರ ಕಾರಣ ಸೇರಿದಂತೆ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಲಕ್ಷ್ಮಣಸಾ ಅರಸಿದ್ದಿ ವರ್ಗಾವಣೆ; ನೂತನ ಎಸ್ಪಿಯಾಗಿ ಶಾಹಿಲ್ ಬಾಗ್ಲಾ ನೇಮಕ
ಶ್ರಾವಣ ಹುಣ್ಣಿಮೆ ಅಂಗವಾಗಿ ಸತ್ಯನಾರಾಯಣ ಪೂಜೆ ಆಯೋಜನೆ
*ಉಡುಮಕಲ್ನಲ್ಲಿ ಆತ್ಮೀಯ ಸನ್ಮಾನ: ಬಿಜೆಪಿ ಬಲವರ್ಧನೆಗೆ ವಿರೂಪಾಕ್ಷಪ್ಪ ಸಿಂಗನಾಳ ಕರೆ*