August 29, 2026

ಶ್ರಾವಣ ಹುಣ್ಣಿಮೆ ಅಂಗವಾಗಿ ಸತ್ಯನಾರಾಯಣ ಪೂಜೆ ಆಯೋಜನೆ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 28/08/2026

ಗಂಗಾವತಿ: ನಗರದ ಅಮರ ಭಗತ್ ಸಿಂಗ್ ನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಹುಣ್ಣಿಮೆಯ ಅಂಗವಾಗಿ ಸ್ಥಳೀಯರ ವತಿಯಿಂದ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಶುಕ್ರವಾರ ನೆರವೇರಿಸಲಾಯಿತು.

ಶ್ರಾವಣ ಹುಣ್ಣಿಮೆಯ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಸತ್ಯನಾರಾಯಣ ಪೂಜೆಯ ಅಂಗವಾಗಿ ವೀರಾಂಜನೇಯಸ್ವಾಮಿ ದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ, ವಿಶೇಷ ಅಲಂಕಾರ ಹಾಗೂ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ಭಕ್ತರು ದೇವರ ದರ್ಶನ ಪಡೆದು, ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿತ್ತು. ಶ್ರಾವಣ ಮಾಸದಲ್ಲಿ ಧಾರ್ಮಿಕ ಆಚರಣೆಗಳಿಗೆ ವಿಶೇಷ ಮಹತ್ವವಿದ್ದು, ಹುಣ್ಣಿಮೆಯಂದು ಸತ್ಯನಾರಾಯಣ ಪೂಜೆ ನಡೆಸುವುದರಿಂದ ಕುಟುಂಬದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿದೆ ಎಂಬ ನಂಬಿಕೆಯಿಂದ ಸ್ಥಳೀಯರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪೂಜಾ ಕಾರ್ಯಕ್ರಮದಲ್ಲಿ ಸ್ಥಳೀಯರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಪೂಜೆಯ ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾಗಲಿಂಗಪ್ಪ ಪತ್ತಾರ, ಈ. ರಾಮಣ್ಣ, ಶಿವಣ್ಣ, ಅಶೋಕಗೌಡ, ಮಲ್ಲಪ್ಪ, ಪರಶುರಾಮ ಇಟಗಿ, ಹೊಸಳ್ಳಿ ಶಿವರಾಜ, ಶಾಂತಪ್ಪ ಇಟಗಿ, ಮಡಿವಾಳಪ್ಪ, ಓಂಕಾರ, ಕುಮಾರ, ಬಸವರಾಜ, ವೆಂಕಟೇಶ ಪೂಜಾರ, ಚಂದ್ರಶೇಖರ ಮುಕ್ಕುಂದಿ, ಶಿವಕುಮಾರ, ಶರಣಪ್ಪ ಹಾಗೂ ಶಂಕ್ರಪ್ಪ ಇಟಗಿ, ಅಲಿಸ್, ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News