October 16, 2026

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಲಕ್ಷ್ಮಣಸಾ ಅರಸಿದ್ದಿ ವರ್ಗಾವಣೆ; ನೂತನ ಎಸ್‌ಪಿಯಾಗಿ ಶಾಹಿಲ್ ಬಾಗ್ಲಾ ನೇಮಕ

🟥 ಟಿ ಪಬ್ಲಿಕ್ ನ್ಯೂಸ್ | ಕೊಪ್ಪಳ
ದಿನಾಂಕ: 29/08/2026

ಕೊಪ್ಪಳ: ಕಳೆದ ಎರಡು ವರ್ಷಗಳಿಂದ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ರಾಮ್ ಲಕ್ಷ್ಮಣಸಾ ಅರಸಿದ್ದಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಬೆಂಗಳೂರಿನ ಪೂರ್ವ ವಲಯದ ಸಂಚಾರಿ ವಿಭಾಗದ ಡಿಸಿಪಿಯಾಗಿದ್ದ ಶಾಹಿಲ್ ಬಾಗ್ಲಾ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಶನಿವಾರ ರಾಜ್ಯ ಸರ್ಕಾರದ ಆಡಳಿತ ವಿಭಾಗದ ಕಾರ್ಯದರ್ಶಿ ರಾಜ್ಯದ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. 2018ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಶಾಹಿಲ್ ಬಾಗ್ಲಾ ಅವರು ಇನ್ನು ಮುಂದೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯೊಂದಿಗೆ ನೂತನ ಎಸ್‌ಪಿ ಶಾಹಿಲ್ ಬಾಗ್ಲಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದು, ಜಿಲ್ಲೆಯ ಪೊಲೀಸ್ ವ್ಯವಸ್ಥೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಆಡಳಿತದ ನಿರೀಕ್ಷೆ ಮೂಡಿದೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!