October 16, 2026

CEIR ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್‌ಗಳ ಪತ್ತೆ

🟥 ಟಿ ಪಬ್ಲಿಕ್ ನ್ಯೂಸ್ | ಕೊಪ್ಪಳ
ದಿನಾಂಕ: 01/09/2026

ಕೊಪ್ಪಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್‌ಗಳನ್ನು CEIR ಪೋರ್ಟಲ್ ಮೂಲಕ ಪತ್ತೆಹಚ್ಚಿದ ಪೊಲೀಸರು, ಅವುಗಳನ್ನು ವಾರಸುದಾರರಿಗೆ ಮರಳಿ ಹಸ್ತಾಂತರಿಸಿದರು.

ಮೊಬೈಲ್ ಕಳೆದುಕೊಂಡವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು CEIR ಪೋರ್ಟಲ್‌ನಲ್ಲಿ ಮೊಬೈಲ್‌ಗಳ ವಿವರಗಳನ್ನು ದಾಖಲಿಸಿ, ತಾಂತ್ರಿಕ ನೆರವಿನ ಮೂಲಕ ಅವುಗಳನ್ನು ಪತ್ತೆಹಚ್ಚುವ ಕಾರ್ಯ ಕೈಗೊಂಡಿದ್ದರು. ಈ ಕಾರ್ಯಾಚರಣೆಯಲ್ಲಿ ಪತ್ತೆಯಾದ ಮೊಬೈಲ್‌ಗಳನ್ನು ಪರಿಶೀಲನೆ ನಡೆಸಿ, ಸೂಕ್ತ ದಾಖಲೆಗಳ ಆಧಾರದ ಮೇಲೆ ಸಂಬಂಧಿಸಿದ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಕಳೆದುಹೋದ ಮೊಬೈಲ್‌ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಮರಳಿ ನೀಡಿದ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!