October 16, 2026

ಬೆದವಟ್ಟಿ ಬ್ರಿಜ್‌ ಕಮ್‌ ಬ್ಯಾರೇಜ್‌ನಲ್ಲಿ ನವಜಾತ ಶಿಶುವಿನ ಶವ ಪತ್ತೆ; ಸ್ಥಳೀಯರಲ್ಲಿ ಆತಂಕ

🟥 ಟಿ ಪಬ್ಲಿಕ್ ನ್ಯೂಸ್ | ಕುಕನೂರು
ದಿನಾಂಕ: 01/09/2026

ಕುಕನೂರು: ತಾಲೂಕಿನ ಬೆದವಟ್ಟಿ ಗ್ರಾಮದ ಸಮೀಪದ ಬ್ರಿಜ್‌ ಕಮ್‌ ಬ್ಯಾರೇಜ್‌ನಲ್ಲಿ ಮಂಗಳವಾರ ಬೆಳಗ್ಗೆ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಬ್ಯಾರೇಜ್‌ನಲ್ಲಿ ಸಂಗ್ರಹವಾಗಿದ್ದ ನೀರಿನಲ್ಲಿ ಜಲಜೀವನ್‌ ಮಿಷನ್‌ ಯೋಜನೆಯ ನೀರಿನ ಪೈಪ್‌ ಸಮೀಪ ಶಿಶುವಿನ ಶವ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿಶುವಿನ ಶವ ಎಷ್ಟು ದಿನಗಳಿಂದ ನೀರಿನಲ್ಲಿ ಇತ್ತು ಎಂಬುದು ಇನ್ನೂ ತಿಳಿದುಬಂದಿಲ್ಲ. ಶಿಶುವನ್ನು ನೀರಿಗೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಕಾರಣರಾದವರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶಿಶುವಿನ ಗುರುತು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದು, ತನಿಖೆ ಮುಂದುವರಿದಿದೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!