October 16, 2026

ದಲಿತರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕದಿದ್ದರೆ ರಾಜ್ಯವ್ಯಾಪಿ ಹೋರಾಟ: ದಲಿತ ಸೇನೆ ಎಚ್ಚರಿಕೆ

filter: 0; fileterIntensity: 0.0; filterMask: 0; captureOrientation: 0; runfunc: 0; algolist: 0; multi-frame: 1; brp_mask:0; brp_del_th:null; brp_del_sen:null; motionR: 0; delta:null; module: video;hw-remosaic: false;touch: (0.15722205, 0.22479147);sceneMode: null;cct_value: 0;AI_Scene: (-1, -1);aec_lux: 139.45787;aec_lux_index: 0;albedo: ;confidence: ;motionLevel: 0;weatherinfo: weather?null, icon:null, weatherInfo:100;temperature: 47;zeissColor: bright;

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 03/09/2026

ಗಂಗಾವತಿ: ರಾಜ್ಯದಲ್ಲಿ ದಲಿತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ, ಸಾಮಾಜಿಕ ಬಹಿಷ್ಕಾರ ಹಾಗೂ ಅಸ್ಪೃಶ್ಯತೆ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದಲಿತ ಸೇನೆ ಕೊಪ್ಪಳ ಜಿಲ್ಲಾ ಅಧ್ಯಕ್ಷ ಉಡುಚಪ್ಪ ಶ್ರೀರಾಮನಗರ ನೇತೃತ್ವದಲ್ಲಿ  “ವಾಕ್ ಫಾರ್ ಜಸ್ಟೀಸ್” (ನ್ಯಾಯಕ್ಕಾಗಿ ನಡಿಗೆ) ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ನಗರದ ಗಾಂಧಿ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಪ್ರಾರಂಭಗೊಂಡ ಕಾಲಿನಡಿಗೆ ನಗರದ ಪ್ರಮುಖ ಬೀದಿಗಳ ಮುಖಾಂತರ ಬಸವಣ್ಣ ಸರ್ಕಲ್ ನಂತರ ಅಂಬೇಡ್ಕರ್ ವೃತ್ತದಿಂದ ಬಾಬು ಜಗಜೀವನ್ ರಾಮ್ ವೃತ್ತದ ಮೂಲಕ  ಕೃಷ್ಣದೇವರಾಯ ವೃತ್ತದ ಬಳಿ ಇರುವ ಬಸವಣ್ಣ ವೃತ್ತಕ್ಕೆ ಆಗಮಿಸಿ ಸಂಘಟನೆಗಳ ವಿವಿಧ ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು

ನಂತರ ಮಾತನಾಡಿದ ಜಿಲ್ಲಾ ಅಧ್ಯಕ್ಷ ಉಡಚಪ್ಪ ಶ್ರೀರಾಮನಗರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಲಿತ ಸಮುದಾಯದ ಜನರ ಮೇಲೆ ಜಾತಿ ನಿಂದನೆ, ಹಲ್ಲೆ, ಕೊಲೆ, ಅತ್ಯಾಚಾರ, ಅಸ್ಪೃಶ್ಯತೆ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಘಟನೆಗಳು ಮುಂದುವರಿದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. 2018ರಿಂದ 2023ರವರೆಗೆ 4,227 ಪ್ರಕರಣಗಳು ದಾಖಲಾಗಿದ್ದರೆ, 2023ರಿಂದ 2026ರವರೆಗೆ 8,069 ಪ್ರಕರಣಗಳು ನಡೆದಿವೆ ಎಂದು ಸಂಘಟನೆ ಮನವಿಯಲ್ಲಿ ಉಲ್ಲೇಖಿಸಿದೆ.

ವಿಶೇಷವಾಗಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಆಶ್ವಿನಿ ಹಾಗೂ ಲಿಂಗಸಗೂರು ತಾಲ್ಲೂಕಿನ ರೇಣುಕಮ್ಮ ಅವರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಸಂಘಟನೆ ತೀವ್ರವಾಗಿ ಖಂಡಿಸಿತು. ಮತ್ತು ಭೂಮನಂದ ದೇವದುರ್ಗ. ಇಂತಹ ಪ್ರಕರಣಗಳಲ್ಲಿ ಆರೋಪಿಗಳು ಯಾವುದೇ ರಾಜಕೀಯ, ಸಾಮಾಜಿಕ ಅಥವಾ ಆರ್ಥಿಕ ಪ್ರಭಾವ ಹೊಂದಿದ್ದರೂ ಕಾನೂನಿನಲ್ಲಿ  ಯಾವುದೇ ರಿಯಾಯಿತಿ ನೀಡಬಾರದು ಎಂದು ಆಗ್ರಹಿಸಲಾಯಿತು.

ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ವಿಶೇಷ ತನಿಖಾ ತಂಡದ ಮೂಲಕ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ, ಪೊಲೀಸ್ ಭದ್ರತೆ ಹಾಗೂ ಅಗತ್ಯ ಸರ್ಕಾರಿ ನೆರವು ನೀಡಬೇಕು. ಕುಟುಂಬದ ಸದಸ್ಯರಿಗೆ ಸೂಕ್ತ ಸರ್ಕಾರಿ ಉದ್ಯೋಗ ಅಥವಾ ಜೀವನೋಪಾಯದ ನೆರವು ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ಸೇರಿದಂತೆ ಅನ್ವಯಿಸುವ ಎಲ್ಲ ಕಾನೂನುಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗುವ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ದಲಿತ ಮಹಿಳೆಯರು ಹಾಗೂ ಯುವಕರ ಸುರಕ್ಷತೆಗಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಮತ್ತು ವಿಶೇಷ ನಿಗಾ ವ್ಯವಸ್ಥೆ ಹೆಚ್ಚಿಸಬೇಕು. ಜಾತಿ ಆಧಾರಿತ ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರ ಮತ್ತು ದೌರ್ಜನ್ಯ ತಡೆಗೆ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

“ದಲಿತರ ಮೇಲಿನ ದೌರ್ಜನ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ನ್ಯಾಯ ಒದಗಿಸಬೇಕು. ಇಲ್ಲವಾದರೆ ಪ್ರಜಾಪ್ರಭುತ್ವ ಹಾಗೂ ಸಂವಿಧಾನಬದ್ಧ ಮಾರ್ಗದಲ್ಲಿ ರಾಜ್ಯವ್ಯಾಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಇದಕ್ಕೆ ಸರ್ಕಾರವೇ ಹೊಣೆ” ಎಂದು ದಲಿತ ಸೇನೆ ಎಚ್ಚರಿಕೆ ನೀಡಿದೆ.

ಈ ಕುರಿತು ಸಮಾಜ ಕಲ್ಯಾಣ ಸಚಿವರಿಗೆ ಗಂಗಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹುಲುಗಪ್ಪ ಹಾಗೂ ಗಂಗಾವತಿ ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ಯು ವಸಂತ್ ಕುಮಾರಿ ಹಾಗೂ ನಗರ ಪೊಲೀಸ್ ಠಾಣೆ ಪಿ ಐ ಪ್ರಕಾಶ್ ಯಾತನೂರು ಇವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರು ಹನುಮಂತಪ್ಪ ಕಾತರಕಿ, ಶಿವಕುಮಾರ್ ಡಿ, ಹನುಮಂತ ನಾಯಕ, ಗೋಪಾಲ ವಕೀಲರು, ನಾಗೇಶ ಸಣಾಪುರ, ದೇವರಾಜು ಉಳೆನೂರು, ಆನಂದ ಇಟಗಿ, ಗಂಗಾವತಿ ತಾಲೂಕ ಅಧ್ಯಕ್ಷ ಮಂಜುನಾಥ್ ಜಿ, ಮುದಿಯಪ್ಪ ಯಾಟಿ, ವೆಂಕೋಬ ನಾಯಕ, ಹುಲುಗಪ್ಪ, ವೀರೇಶ, ರಾಘವೇಂದ್ರ, ಮರಿಸ್ವಾಮಿ, ಬಸವರಾಜ ಚಿಕ್ಕನಕೊಪ್ಪ, ಕಳಕಪ್ಪ, ಮಾಂತೇಶ್, ಪಾಮಣ್ಣ, ಮೂರ್ತಿ, ನಾಗರಾಜ, ನರೇಶ್, ಉಪಸ್ಥಿತರಿದ್ದರು 

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!