October 16, 2026

ಸಿ.ಹೆಚ್. ನಿಖಿಲ್ ಸುಬ್ಬರಾವ್ ಸ್ಮರಣಾರ್ಥ ಸ್ವಯಂಪ್ರೇರಿತ ರಕ್ತದಾನ ಶಿಬಿರ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 13/09/2026

ಗಂಗಾವತಿ: ತುರ್ತು ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವ ಉಳಿಸಬಹುದಾಗಿದ್ದು, ಸದೃಢ ಯುವಜನತೆ ಸ್ವಯಂಪ್ರೇರಣೆಯಿಂದ ರಕ್ತದಾನಕ್ಕೆ ಮುಂದಾಗಬೇಕು ಎಂದು ಶಿಬಿರದ ಆಯೋಜಕರು ಹಾಗೂ ಹಿರಿಯರು ಕರೆ ನೀಡಿದರು.

ಗಂಗಾವತಿ ತಾಲೂಕಿನ ಬಸವಪಟ್ಟಣ ಗ್ರಾಮದ ಕೋದಂಡರಾಮ ದೇವಸ್ಥಾನದ ಆವರಣದಲ್ಲಿ ಭಾನುವಾರ ಸಿ.ಹೆಚ್. ನಿಖಿಲ್ ಸುಬ್ಬರಾವ್ ಅವರ 5ನೇ ತಿಂಗಳ ಸ್ಮರಣಾರ್ಥ ಗುರು-ಹಿರಿಯರು ಹಾಗೂ ಆತ್ಮೀಯ ಗೆಳೆಯರ ಬಳಗದ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಮಾತನಾಡಿದ ಗಣ್ಯರು, ಆಪತ್ಕಾಲದಲ್ಲಿ ದೊರೆಯುವ ಒಂದು ಯುನಿಟ್ ರಕ್ತವೂ ಅಮೂಲ್ಯ ಜೀವವೊಂದನ್ನು ಉಳಿಸುವ ಶಕ್ತಿಯನ್ನು ಹೊಂದಿದೆ. ಯುವಕರು ಇಂತಹ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಮಾಜಕ್ಕೆ ನೈಜ ಕೊಡುಗೆ ನೀಡಬೇಕು ಎಂದು ಹೇಳಿದರು.

ಶಿಬಿರದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪ್ರಮುಖರು ಹಾಗೂ ಗ್ರಾಮದ ನೂರಾರು ಯುವಕರು ಉತ್ಸಾಹದಿಂದ ಪಾಲ್ಗೊಂಡು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಸಂಘಟಕರ ವತಿಯಿಂದ ಅಭಿನಂದನೆ ಸಲ್ಲಿಸಿ ಪ್ರಮಾಣಪತ್ರ ವಿತರಿಸಲಾಯಿತು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!