🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 14/09/2026
ಮಲ್ಲಿಕಾರ್ಜುನ ನಾಗಪ್ಪಗೆ ಅಮರ ಭಗತ್ಸಿಂಗ್ ನಗರದ ಯುವಕ ಮಂಡಳಿಯಿಂದ ಸನ್ಮಾನ
ಗಂಗಾವತಿ: ಕಾಂಗ್ರೆಸ್ ಪಕ್ಷದ ನೂತನ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ನಾಗಪ್ಪ ಅವರನ್ನು ಅಮರ ಭಗತ್ಸಿಂಗ್ ನಗರದ ಯುವಕ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಗರದ ನೀಲಕಂಠೇಶ್ವರ ವೃತ್ತದ ಸಮೀಪದಲ್ಲಿರುವ ಮಲ್ಲಿಕಾರ್ಜುನ ನಾಗಪ್ಪ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಅಶೋಕಗೌಡ ಮಾತನಾಡಿ, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಿರುವುದು ಸಂತಸದ ಸಂಗತಿ ಎಂದರು.
ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ಶಾಸಕರಾಗಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿರುವ ನಾಗಪ್ಪ ಅವರಿಗೆ ಪಕ್ಷದ ಸಂಘಟನೆ ಮತ್ತು ಆಡಳಿತದ ಅಪಾರ ಅನುಭವವಿದೆ. ಇಂತಹ ಹಿರಿಯ ನಾಯಕರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಹೇಳಿದರು.
ಮಲ್ಲಿಕಾರ್ಜುನ ನಾಗಪ್ಪ ಅವರ ಸಾರಥ್ಯದಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಕ್ಷದ ಗೆಲುವಿಗೆ ಶ್ರಮಿಸಲಾಗುವುದು ಎಂದರು.
ನಂತರ ಯುವಕ ಮಂಡಳಿಯ ಸದಸ್ಯರು ಮಲ್ಲಿಕಾರ್ಜುನ ನಾಗಪ್ಪ ಅವರನ್ನು ಸನ್ಮಾನಿಸಿ, ಸಿಹಿ ತಿನ್ನಿಸಿ ಗೌರವಿಸಿದರು.
ಓಂಕಾರ, ಸುಭಾಷ, ಶಶಿಕುಮಾರ, ಪರಶುರಾಮ ಇಟಗಿ, ಬಸವರಾಜ, ಮಂಜುನಾಥ, ಅಲಿಸ್, ವೆಂಕಟೇಶ್ ಮಾಂತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ