🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 24/09/2026
ಗಂಗಾವತಿ: ಇಂಟಲ್ ಹಾಗೂ ರಿಚ್ ಮಚ್ ಹೈಯರ್ ಅಕಾಡೆಮಿ ಮತ್ತು ಸಂಕಲ್ಪ ಕಲಾ ಹಾಗೂ ವಾಣಿಜ್ಯ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಹಯೋಗದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಬ್ಯೂಟಿಷಿಯನ್ ತರಬೇತಿ ಆಯೋಜಿಸಲಾಗಿದೆ ಎಂದು ಸಂಕಲ್ಪ ಕಲಾ ಹಾಗೂ ವಾಣಿಜ್ಯ ಪ್ರಥಮ ದರ್ಜೆ ಮಹಾವಿದ್ಯಾಲಯದ ಉಪಾಧ್ಯಕ್ಷರಾದ ಎಂ.ಆರ್.ಮಂಜುಸ್ವಾಮಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಹಮ್ಮಿಕೊಂಡ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.
ತರಬೇತಿಯ ಮೂಲಕ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅಗತ್ಯವಾದ ಕೌಶಲ್ಯಗಳನ್ನು ಕಲಿಸಿಕೊಡಲಾಗುವುದು. ಅಲ್ಲದೇ ಸ್ವಯಂ ಉದ್ಯೋಗ ಆರಂಭಿಸಲು ಅಗತ್ಯವಿರುವ ಸಾಲಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಸೆಪ್ಟೆಂಬರ್ 28ರಿಂದ ಅಕ್ಟೋಬರ್ 01ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಯಾವುದೇ ಶೈಕ್ಷಣಿಕ ಅರ್ಹತೆ ಅಗತ್ಯವಿಲ್ಲ. 18ರಿಂದ 35 ವರ್ಷದೊಳಗಿನ ಮಹಿಳೆಯರಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದ್ದು, 25 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಆಸಕ್ತ ಮಹಿಳೆಯರು ಆಧಾರ್ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ಸಂಕಲ್ಪ ಪ್ರಥಮ ದರ್ಜೆ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಒಂದು ತಿಂಗಳ ಕಾಲ ನಡೆಯುವ ತರಬೇತಿಯ ಸಮಯ ಹಾಗೂ ತರಗತಿ ವಿಧಾನವನ್ನು ನೋಂದಣಿ ಸಂದರ್ಭದಲ್ಲಿ ತಿಳಿಸಲಾಗುವುದು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಬಸವರಾಜ ಸಿರಿಗೇರಿ, ಉಪನ್ಯಾಸಕರಾದ ಮಧುಸ್ವಾಮಿ, ನಾಗರಾಜ ಎಚ್., ಶಿವಶರಣ ಹಾಗೂ ನಿರ್ದೇಶಕ ಡಾ. ಅಮೀತ್ ಕುಮಾರ ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ