🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 28/09/2026
ಗಂಗಾವತಿ: ನಗರದ ಅಮರ ಭಗತ್ ಸಿಂಗ್ ಏರಿಯಾದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಹಾಗೂ ಸ್ಥಳೀಯರು ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ಮಾತನಾಡಿದ ನಗರಸಭೆ ಮಾಜಿ ಸದಸ್ಯ ನೀಲಕಂಠ ಕಟ್ಟಿಮನಿ, ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್ ಅವರು ತೋರಿದ ಧೈರ್ಯ, ದೇಶಪ್ರೇಮ ಹಾಗೂ ತ್ಯಾಗ ಇಂದಿನ ಯುವಜನತೆಗೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಭಗತ್ ಸಿಂಗ್ ಅವರು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ, ಬ್ರಿಟಿಷರ ವಿರುದ್ಧ ಸೆಟೆದು ನಿಂತಿದ್ದರು. ಅವರ ಅಪ್ರತಿಮ ದೇಶಪ್ರೇಮ, ಹೋರಾಟದ ಮನೋಭಾವ ಮತ್ತು ತ್ಯಾಗವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಯುವಕರು ಭಗತ್ ಸಿಂಗ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಾರ್ಡ್ನ ಪ್ರಮುಖರಾದ ಸಂಗಯ್ಯಸ್ವಾಮಿ, ಶರಣಪ್ಪ, ತ್ಯಾವರಪ್ಪ, ಮೌನೇಶ ಜಂಗ್ಲಿ, ಶಶಿಕುಮಾರ, ಶರಣಪ್ಪ ಸೇರಿದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಅವರ ದೇಶಭಕ್ತಿ ಮತ್ತು ಸ್ವಾತಂತ್ರ್ಯ ಹೋರಾಟದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ