October 16, 2026

ಅ.25ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 03/10/2026

ಗಂಗಾವತಿ: ವೀರಶೈವ ಲಿಂಗಾಯತ ಪಂಚಮಸಾಲಿ ಶಿಕ್ಷಣ ಮತ್ತು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2026-27ನೇ ಸಾಲಿನ ಕಿತ್ತೂರು ವೀರ ರಾಣಿ ಚೆನ್ನಮ್ಮ ಜಯಂತಿ ಹಾಗೂ 202ನೇ ವಿಜಯೋತ್ಸವವನ್ನು ಅ. 25ರಂದು ಮರಳಿ ಗ್ರಾಮದಲ್ಲಿ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಪ್ಪ ಯಲಬುರ್ಗಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿ ಹಾಗೂ ವಿಜಯೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಎಸ್ಸೆಸ್ಸೆಲ್ಸಿಯಲ್ಲಿ ಹಾಗೂ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಫಲಿತಾಂಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೇ, ಶಿಕ್ಷಣ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು.

ಸಮಾಜದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಉನ್ನತ ಸ್ಥಾನಕ್ಕೇರಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನೂ ಕಾಯ೯ಕ್ರಮದ ಅಂಗವಾಗಿ ಅದ್ದೂರಿಯಾಗಿ ಕುಂಭ ಮೆರವಣಿಗೆ, ಕಿತ್ತೂರ ರಾಣಿ ಚೆನ್ನಮ್ಮ ಅವರ ಭಾವಚಿತ್ರ ಮೆರವಣಿಗೆ ನಂತರ ವೇದಿಕೆ ಕಾಯ೯ಕ್ರಮ ನಡೆಯಲಿದೆ. ಸಮಾಜದ ಪ್ರತಿಯೊಬ್ಬರು ಜಯಂತಿಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಹೇಳಿದರು. 

ತಾಲೂಕು ಸಂಘಟನಾ ಕಾರ್ಯದರ್ಶಿ ಮಂಜುನಾಥ ಹೊಸ್ಕೇರಾ, ಸಮಾಜದ ಪ್ರಮುಖರಾದ ದೇವಾನಂದ ಆರ್, ದೊಡ್ಡಬಸವನಗೌಡ ಪೊಲೀಸ್ ಪಾಟೀಲ್, ಬಸವನಗೌಡ, ಬಸವರಾಜ ಎಸ್. ಪಾಟೀಲ್, ರೇಣುಕಗೌಡ ಬಿ, ವೇಣು ಎಲಿಗಾರ, ಜಂಬಣ್ಣ ತಾಳೂರ, ಸುರೇಶ್ ಗೌರಪ್ಪ, ವೀರೇಶ ಅಂಗಡಿ, ಎಸ್.ವೀರೇಶಪ್ಪ, ಮಹೇಶ ಉಜ್ಜಯಿನಿ, ಶರಣಪ್ಪ, ಸಂತೋಷ ನಾಗಲಪೂರ, ಪ್ರಕಾಶ್ ಶೆಟ್ಟಿ, ಅಂಬರೇಷ ತಾಳೂರ ಹಾಗೂ ವೀರನಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!