October 16, 2026

ಅಕ್ಟೋಬರ್ 8ರಂದು ಗಂಗಾವತಿ ಲಯನ್ಸ್ ಶಾಲೆಯಲ್ಲಿ ಇಸ್ರೋ ‘ವಿಶ್ವ ಬಾಹ್ಯಾಕಾಶ ಸಪ್ತಾಹ-2026’

filter: 2205; fileterIntensity: 0.0; filterMask: 0; captureOrientation: 0; runfunc: 0; algolist: 0; multi-frame: 1; brp_mask:8; brp_del_th:0.0007,0.0025; brp_del_sen:0.1000,0.1000; motionR: 65536; delta:1; bokeh:1; module: photo;hw-remosaic: false;touch: (0.12277742, 0.19673897);sceneMode: 3145728;cct_value: 0;AI_Scene: (-1, -1);aec_lux: 271.27094;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 42;zeissColor: film;

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 03/10/2026

ಗಂಗಾವತಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಾಗೂ ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರ (ಯುಆರ್‌ಎಸ್‌ಸಿ) ಸಹಯೋಗದಲ್ಲಿ ನಗರದ ಲಯನ್ಸ್ ಶಾಲೆ ಆವರಣದಲ್ಲಿ ಅಕ್ಟೋಬರ್ 8ರಂದು ‘ವಿಶ್ವ ಬಾಹ್ಯಾಕಾಶ ಸಪ್ತಾಹ-2026’ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದ ಆಹ್ವಾನ ಪತ್ರಿಕೆ ಹಾಗೂ ಪ್ರಚಾರ ಬಿತ್ತಿಪತ್ರಗಳನ್ನು ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಜಿ. ಚಂದ್ರಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ದೇವರಾಜ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಚಂದ್ರೇಗೌಡ ಮಾಲಿ ಪಾಟೀಲ್ ಬಿಡುಗಡೆ ಮಾಡಿದರು.

ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್ 4ರಿಂದ 10ರವರೆಗೆ ವಿಶ್ವ ಬಾಹ್ಯಾಕಾಶ ಸಪ್ತಾಹ ಆಚರಿಸಲಾಗುತ್ತದೆ. ಪ್ರಸಕ್ತ ವರ್ಷದ ಕಾರ್ಯಕ್ರಮವನ್ನು ‘ರಾಕೆಟ್ ಕ್ರಾಂತಿ’ (Rocket Revolution) ಎಂಬ ವಿಶೇಷ ಆಶಯದಡಿ ಆಯೋಜಿಸಲಾಗುತ್ತಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ರಾಕೆಟ್ ತಂತ್ರಜ್ಞಾನ ಸಾಧಿಸಿರುವ ಪ್ರಮುಖ ಬೆಳವಣಿಗೆಗಳು ಹಾಗೂ ಮೈಲಿಗಲ್ಲುಗಳನ್ನು ಪರಿಚಯಿಸಲಾಗುವುದು ಎಂದು ಆಯೋಜಕರು ತಿಳಿಸಿದರು.

ಒಂದು ದಿನ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಇಸ್ರೋದ ವಿವಿಧ ಮಾದರಿಗಳು, ಬಾಹ್ಯಾಕಾಶ ವಿಜ್ಞಾನ ಪ್ರದರ್ಶನಗಳು ಹಾಗೂ ಆಡಿಯೋ-ವಿಡಿಯೋ ದೃಶ್ಯಾವಳಿಗಳ ಮೂಲಕ ಮಾಹಿತಿ ನೀಡುವ ಆಕರ್ಷಕ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಅಗತ್ಯವಿರುವ ಸಭಾಂಗಣ, ಪ್ರದರ್ಶನ ವಿಭಾಗ, ಉದ್ಘಾಟನೆ ಮತ್ತು ಸಮಾರೋಪ ಸಮಾರಂಭಗಳ ಸಂಪೂರ್ಣ ವ್ಯವಸ್ಥೆಯನ್ನು ಲಯನ್ಸ್ ಶಾಲೆಯ ಆಡಳಿತ ಮಂಡಳಿ ನಿರ್ವಹಿಸಲಿದೆ.

ಕಾರ್ಯಕ್ರಮದ ಒಟ್ಟಾರೆ ಮೇಲ್ವಿಚಾರಣೆಯನ್ನು WSW-2026 ಅಪೆಕ್ಸ್ ಸಮಿತಿ ಅಧ್ಯಕ್ಷ ಮಧುಸೂಧನ ಸಿ.ಎಸ್., ಅಧ್ಯಕ್ಷೆ ಪ್ರತಿಭಾ ಹೆಬ್ಬಾರ್ ಪಿ., ಸದಸ್ಯ ಗೋವಿಂದರಾಜ ಟಿ.ಎಸ್. ಹಾಗೂ ಸದಸ್ಯ ಕಾರ್ಯದರ್ಶಿ ಮೋಹನ್ ಕುಮಾರ್ ಟಿ.ಎಂ. ವಹಿಸಿಕೊಂಡಿದ್ದಾರೆ.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಇಸ್ರೋ ಆಯೋಜಿಸಿರುವ ವಿಜ್ಞಾನ ವಸ್ತುಪ್ರದರ್ಶನ ಹಾಗೂ ರಸಪ್ರಶ್ನೆ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆಯ ಅಭಿಷೇಕ್, ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಜಗನ್ನಾಥ ದಾಸ್, ಲಯನ್ಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಗುರುಪಾದಯ್ಯ ಹಿರೇಮಠ, ಶಂಕರ ಹೊಸಳ್ಳಿ, ನೇಕಂಟಿ ಹರೀಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!