🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 04/10/2026
ಗಂಗಾವತಿ: ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಅವರನ್ನು ಗಂಗಾವತಿ ತಾಲೂಕು ಉಪ್ಪಾರ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಹಿರಿಯರು ಮಾತನಾಡಿ, ಮಲ್ಲಿಕಾರ್ಜುನ ನಾಗಪ್ಪ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಸದೃಢವಾಗಲಿ. ನೆಪಥ್ಯಕ್ಕೆ ಸರಿದಿರುವ ಪಕ್ಷದ ಕಾರ್ಯಕರ್ತರನ್ನು ಗುರುತಿಸಿ, ಅವರಿಗೆ ಸೂಕ್ತ ಅವಕಾಶ ಕಲ್ಪಿಸುವ ಮೂಲಕ ಪಕ್ಷ ಸಂಘಟನೆ ಬಲಪಡಿಸಲು ಶ್ರಮಿಸಬೇಕು ಎಂದು ಹಾರೈಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಉಪ್ಪಾರ ಸಮಾಜದ ತಾಲೂಕು ಅಧ್ಯಕ್ಷ ಅಮರಜ್ಯೋತಿ ವೆಂಕಟೇಶ್, ಕಾರ್ಯಾಧ್ಯಕ್ಷ ಮುಕ್ಕಣ್ಣ ಮಾನಳ್ಳಿ, ನಗರಸಭೆ ಮಾಜಿ ಅಧ್ಯಕ್ಷ ದಾನಪ್ಪ ದರೋಜಿ, ಹಿರಿಯರಾದ ರಾಮಣ್ಣ ಕುರಿತಲೆ, ವಾಸುದೇವ ಜಂಬಣ್ಣ, ಹುಲಿಗಿ ಯಂಕಪ್ಪ, ವಿಐಪಿ ಮೆಲೋಡಿಸ್ ಪಂಪಾಪತಿ ಇಂಗಳಗಿ, ವಕೀಲರಾದ ಪ್ರಭು ಹಾಗೂ ಶರಣಪ್ಪ ಮಿಣಜಿಗಿ, ಮಾನಳ್ಳಿ ಹನುಮಂತಪ್ಪ, ಸಮಾಜದ ಉಪಾಧ್ಯಕ್ಷ ಗೋವಿಂದಪ್ಪ ಹುಲಿಗಿ, ಪ್ರಮುಖರಾದ ಯಂಕಪ್ಪ ಕೊಂಡಿಕಾರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ